Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:7 - ಪರಿಶುದ್ದ ಬೈಬಲ್‌

7 ಅಬೀನಾದಾಬನ ಮನೆಯಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ಎತ್ತಿ ಒಂದು ಹೊಸ ಬಂಡಿಯಲ್ಲಿಟ್ಟರು. ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಬೀನಾದಾಬಿನ ಮನೆಯಿಂದ ಆ ದೇವಮಂಜೂಷವನ್ನು ಹೊರಗೆ ತಂದು, ಒಂದು ಹೊಸ ಎತ್ತಿನ ಬಂಡಿಯ ಮೇಲಿಟ್ಟರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ದೇವಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಅಬೀನಾದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು, ಅದನ್ನು ಹೊಸ ಬಂಡಿಯ ಮೇಲೆ ಏರಿಸಿದರು. ಉಜ್ಜನು ಹಾಗೂ ಅಹಿಯೋವನು ಆ ಹೊಸ ಬಂಡಿಯನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:7
7 ತಿಳಿವುಗಳ ಹೋಲಿಕೆ  

“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


ಕಳೆದ ಸಲ, ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಹೇಗೆ ತೆಗೆದುಕೊಂಡು ಹೋಗಬೇಕೆಂದು ಯೆಹೋವನಲ್ಲಿ ವಿಚಾರಿಸಲಿಲ್ಲ. ಲೇವಿಯರಾದ ನೀವು ಅದನ್ನು ಹೊರಲಿಲ್ಲ. ಆದ್ದರಿಂದಲೇ ನಮ್ಮ ದೇವರಾದ ಯೆಹೋವನು ನಮ್ಮನ್ನು ಶಿಕ್ಷಿಸಿದನು” ಎಂದು ಹೇಳಿದನು.


“ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರವಾದ ಸೇವೆಗಾಗಿ ನೇಮಿಸಿದ್ದಾನೆ” ಎಂದು ದಾವೀದನು ಹೇಳಿದನು.


ದಾವೀದನ ಜನರು ಪವಿತ್ರ ಪೆಟ್ಟಿಗೆಯನ್ನು ಹೊಸಬಂಡಿಯ ಮೇಲಿಟ್ಟರು. ಅವರು ಬೆಟ್ಟದ ಮೇಲಿರುವ ಅಬೀನಾದಾಬನ ಮನೆಯಿಂದ ದೇವರ ಪವಿತ್ರ ಪೆಟ್ಟಿಗೆಯನ್ನು ತಂದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ಹೊಡೆದರು.


“ಈಗ ಒಂದು ಹೊಸ ಬಂಡಿಯನ್ನು ಮಾಡಿಸಿ ಮತ್ತು ಈಗ ತಾನೆ ಕರು ಹಾಕಿರುವ ಎರಡು ಹಸುಗಳನ್ನು ತೆಗೆದುಕೊಳ್ಳಿರಿ. ಈ ಹಸುಗಳು ಹೊಲಗಳಲ್ಲಿ ಹಿಂದೆಂದೂ ನೊಗ ಹೊತ್ತಿಲ್ಲದಂಥವುಗಳಾಗಿರಬೇಕು. ಈ ಹಸುಗಳನ್ನು ಬಂಡಿಗೆ ಹೂಡಿರಿ ಮತ್ತು ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಅವುಗಳನ್ನು ದೊಡ್ಡಿಯಲ್ಲಿ ಬಿಡಿರಿ. ಅವುಗಳು ತಮ್ಮ ತಾಯಂದಿರನ್ನು ಹಿಂಬಾಲಿಸಲು ಅವಕಾಶಕೊಡಕೂಡದು.


ಬೆಟ್ಟದ ಮೇಲಿನ ಅಬೀನಾದಾಬನ ಮನೆಯಿಂದ ಹೊಸ ಬಂಡಿಯನ್ನು ತರುವಾಗ ಉಜ್ಜನೂ ಅಹಿಯೋವನೂ ಮುನ್ನಡೆಸಿದರು. ಈ ಬಂಡಿಯ ಮೇಲೆ ದೇವರ ಪವಿತ್ರ ಪೆಟ್ಟಿಗೆಯಿತ್ತು. ಉಜ್ಜನೂ ಬಂಡಿಯ ಮೇಲಿದ್ದನು. ಪವಿತ್ರ ಪೆಟ್ಟಿಗೆಯ ಮುಂದೆ ಅಹಿಯೋವನು ನಡೆಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು