1 ಪೂರ್ವಕಾಲ ವೃತ್ತಾಂತ 13:9 - ಪರಿಶುದ್ದ ಬೈಬಲ್9 ಅವರು ಕೀದೋನನ ಕಣಕ್ಕೆ ಬಂದಾಗ ಗಾಡಿ ಎಳೆಯುತ್ತಿದ್ದ ಎತ್ತುಗಳು ಮುಗ್ಗರಿಸಿದವು. ಆಗ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಬೀಳುವುದರಲ್ಲಿತ್ತು. ಉಜ್ಜನು ತನ್ನ ಕೈಯನ್ನು ಚಾಚಿ ಪೆಟ್ಟಿಗೆಯನ್ನು ಹಿಡಿಯಲು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕೀದೋನ್ ಎಂಬಲ್ಲಿ ಕಾಳುತೂರುವ ಕಣಕ್ಕೆ ಬಂದಾಗ ಎತ್ತುಗಳು ಎಡವಿದವು. ಆಗ ಉಜ್ಜನು ತನ್ನ ಕೈಗಳನ್ನು ಚಾಚಿ ದೇವಮಂಜೂಷವನ್ನು ಹಿಡಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವಮಂಜೂಷವನ್ನು ಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಅವರು ಕಿದೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು. ಅಧ್ಯಾಯವನ್ನು ನೋಡಿ |