1 ಪೂರ್ವಕಾಲ ವೃತ್ತಾಂತ 14:11 - ಪರಿಶುದ್ದ ಬೈಬಲ್11 ಆಗ ದಾವೀದನೂ ಅವನ ಸಂಗಡಿಗರೂ ಬಾಳ್ ಪೆರಾಚೀಮ್ ಎಂಬ ಸ್ಥಳದವರೆಗೆ ಹೋಗಿ ಫಿಲಿಷ್ಟಿಯರನ್ನು ನಾಶಮಾಡಿದನು. “ದೇವರು ಕಟ್ಟೆಯೊಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ದಾಳಿಮಾಡಿ ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ” ಎಂದು ದಾವೀದನು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಷ್ಟರಲ್ಲಿ ಬಾಳ್ ಪೆರಾಚೀಮಿಗೆ ಬಂದ ಅವರನ್ನು ದಾವೀದನು ಸೋಲಿಸಿ, “ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ” ಎಂದು ಹೇಳಿದ್ದರಿಂದ ಆ ಯುದ್ಧ ಸ್ಥಳಕ್ಕೆ ಬಾಳ್ ಪೆರಾಚೀಮ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೀಗೆ ದಾವೀದ ಬಾಳ್ ಪೆರಾಚೀಮ್ ಎಂಬಲ್ಲಿ ಅವರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನುಗ್ಗಿ, ವೈರಿಸೈನ್ಯವನ್ನು ನಾಶಮಾಡಲು ಸರ್ವೇಶ್ವರ ನನ್ನನ್ನು ಉಪಯೋಗಿಸಿದ್ದಾರೆ,” ಎಂದು ಹೇಳಿದನು. ಈ ಕಾರಣ ಆ ಸ್ಥಳಕ್ಕೆ ‘ಬಾಳ್ ಪೆರಾಚೀಮ್’ ಎಂಬ ಹೆಸರು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಷ್ಟರಲ್ಲಿ ಬಾಳ್‍ಪೆರಾಚೀವಿುಗೆ ಬಂದ ಅವರನ್ನು ದಾವೀದನು ಸೋಲಿಸಿ - ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆಂದು ಹೇಳಿದ್ದರಿಂದ ಆ ಯುದ್ಧಸ್ಥಳಕ್ಕೆ ಬಾಳ್‍ಪೆರಾಚೀಮೆಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹಾಗೆಯೇ ದಾವೀದನು ಮತ್ತು ಅವನ ಸಂಗಡಿಗರೂ ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾರೆ,” ಎಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |