Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:12 - ಪರಿಶುದ್ದ ಬೈಬಲ್‌

12 ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದರು. ದಾವೀದನು ಅವುಗಳನ್ನೆಲ್ಲಾ ಒಟ್ಟುಸೇರಿಸಿ ಸುಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ದೇವರುಗಳನ್ನು ಸುಟ್ಟುಬಿಡುವಂತೆ ದಾವೀದನು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಫಿಲಿಷ್ಟಿಯರು ತಲೆ ತಪ್ಪಿಸಿಕೊಂಡು ಓಡಿಹೋಗುವಾಗ ತಮ್ಮ ವಿಗ್ರಹಗಳನ್ನು ಅಲ್ಲೇ ಬಿಟ್ಟುಹೋದರು. ಅವೆಲ್ಲವನ್ನು ಸುಟ್ಟುಹಾಕಬೇಕೆಂದು ದಾವೀದನು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ದೇವರುಗಳನ್ನು ದಾವೀದನು ಸುಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಲ್ಲಿ ಫಿಲಿಷ್ಟಿಯರು ತಮ್ಮ ದೇವರುಗಳನ್ನು ಬಿಟ್ಟು ಹೋದುದರಿಂದ, ದಾವೀದನು ಅವುಗಳನ್ನು ಸುಟ್ಟುಹಾಕಬೇಕೆಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:12
10 ತಿಳಿವುಗಳ ಹೋಲಿಕೆ  

ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.


ಅವರು ಆ ದೇಶಗಳ ದೇವರುಗಳನ್ನು ಬೆಂಕಿಯಲ್ಲಿ ಎಸೆದರು. ಆದರೆ ಅವು ನಿಜವಾದ ದೇವರುಗಳಲ್ಲ. ಅವುಗಳು ಮಾನವರಿಂದ ಮರ ಮತ್ತು ಕಲ್ಲುಗಳಿಂದ ನಿರ್ಮಿತವಾಗಿದ್ದವು. ಆದಕಾರಣವೇ ಅಶ್ಶೂರದ ರಾಜರುಗಳು ಅವುಗಳನ್ನು ನಾಶಗೊಳಿಸಿದರು.


“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.


“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.


“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.


ಫಿಲಿಷ್ಟಿಯರು ತಮ್ಮ ದೇವರ ವಿಗ್ರಹಗಳನ್ನು ಬಾಳ್‌ಪೆರಾಚೀಮ್‌ನಲ್ಲಿಯೇ ಬಿಟ್ಟುಹೋದರು. ದಾವೀದನು ಮತ್ತು ಅವನ ಜನರು ಈ ವಿಗ್ರಹಗಳನ್ನು ತೆಗೆದುಕೊಂಡು ಹೋದರು.


ಆಗ ದಾವೀದನೂ ಅವನ ಸಂಗಡಿಗರೂ ಬಾಳ್ ಪೆರಾಚೀಮ್ ಎಂಬ ಸ್ಥಳದವರೆಗೆ ಹೋಗಿ ಫಿಲಿಷ್ಟಿಯರನ್ನು ನಾಶಮಾಡಿದನು. “ದೇವರು ಕಟ್ಟೆಯೊಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ದಾಳಿಮಾಡಿ ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ” ಎಂದು ದಾವೀದನು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್ ಎಂದು ಹೆಸರಾಯಿತು.


ಫಿಲಿಷ್ಟಿಯರು ಮತ್ತೆ ರೆಫಾಯೀಮ್ ತಗ್ಗಿನಲ್ಲಿ ವಾಸಮಾಡುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿದರು.


ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕಸ್ತಂಭಗಳನ್ನು ಚೂರುಚೂರು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು