1 ಪೂರ್ವಕಾಲ ವೃತ್ತಾಂತ 14:14 - ಪರಿಶುದ್ದ ಬೈಬಲ್14 ದಾವೀದನು ಮತ್ತೆ ಯೆಹೋವನಿಗೆ ಪ್ರಾರ್ಥಿಸಿ ವಿಚಾರಿಸಿದನು. ಯೆಹೋವನು ಅವನ ಪ್ರಾರ್ಥನೆಗೆ ಉತ್ತರಕೊಟ್ಟು, “ದಾವೀದನೇ, ಫಿಲಿಷ್ಟಿಯರನ್ನು ಬೆಟ್ಟದ ಮೇಲೆ ನೀನು ಹಿಂಬಾಲಿಸದಿರು. ಅವರ ಹಿಂದಿನಿಂದ ಹೋಗಿ ಬಾಲ್ಸಾಮ್ ಮರಗಳ ಹಿಂದೆ ಅವಿತುಕೊಂಡಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದಾವೀದನು ಪುನಃ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಯೆಹೋವನು ಅವನಿಗೆ, “ನೀನು ಅವರನ್ನು ಬೆನ್ನಟ್ಟಬೇಡ, ಅವರ ಎದುರುಗಡೆಯಿಂದ ದಾಳಿಮಾಡದೆ ಹಿಂತಿರುಗಿ ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ದಾಳಿಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದಾವೀದನು ಮತ್ತೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದನು. “ನೀನು ಅವರನ್ನು ಬೆನ್ನಟ್ಟಬೇಡ, ಸುತ್ತಿಕೊಂಡು ಹೋಗಿ ಬಾಕಾಮರಗಳಿರುವ ಆಚೆಕಡೆಯಿಂದ ಅವರ ಮೇಲೆ ದಾಳಿಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದಾವೀದನು ತಿರಿಗಿ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ಅವರನ್ನು ಬೆನ್ನಟ್ಟಬೇಡ; ಅವರ ಎದುರಿನಿಂದ ತಿರುಗಿಕೊಂಡು ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ದಾವೀದನು ತಿರುಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಹಿಂದೆ ಹೋಗದೆ, ಅವರನ್ನು ಬಿಟ್ಟು ತಿರುಗಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು. ಅಧ್ಯಾಯವನ್ನು ನೋಡಿ |