1 ಪೂರ್ವಕಾಲ ವೃತ್ತಾಂತ 14:3 - ಪರಿಶುದ್ದ ಬೈಬಲ್3 ಜೆರುಸಲೇಮಿನಲ್ಲಿ ದಾವೀದನು ಇನ್ನೂ ಹಲವು ಸ್ತ್ರೀಯರನ್ನು ಮದುವೆಯಾದನು. ಅವನಿಗೆ ಅನೇಕ ಗಂಡುಹೆಣ್ಣು ಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದಾವೀದನು ಯೆರೂಸಲೇಮಿನಲ್ಲಿಯೂ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಗಂಡು ಹೆಣ್ಣು ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಜೆರುಸಲೇಮಿನಲ್ಲೂ ದಾವೀದನು ಹಲವು ಮಹಿಳೆಯರನ್ನು ವಿವಾಹವಾಗಿ ಇನ್ನೂ ಕೆಲವು ಮಂದಿ ಗಂಡು ಮಕ್ಕಳನ್ನೂ ಹೆಣ್ಣು ಮಕ್ಕಳನ್ನೂ ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದಾವೀದನು ಯೆರೂಸಲೇವಿುನಲ್ಲಿ ಸಹ ಕೆಲವು ಮಂದಿ ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದಾವೀದನು ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡನು. ಇನ್ನೂ ಹೆಚ್ಚು ಪುತ್ರ, ಪುತ್ರಿಯರನ್ನೂ ಪಡೆದನು. ಅಧ್ಯಾಯವನ್ನು ನೋಡಿ |
“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.