1 ಪೂರ್ವಕಾಲ ವೃತ್ತಾಂತ 15:11 - ಪರಿಶುದ್ದ ಬೈಬಲ್11 ನಂತರ ದಾವೀದನು ಯಾಜಕರಾದ ಚಾದೋಕನನ್ನು ಮತ್ತು ಎಬ್ಯಾತಾರನನ್ನು ಮತ್ತು ಕೆಳಕಂಡ ಲೇವಿಯರನ್ನು ಸಹ ಕರೆಸಿದನು: ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಮೇಲೆ ದಾವೀದನು ಚಾದೋಕ್, ಎಬ್ಯಾತಾರ್ ಎಂಬ ಯಾಜಕರನ್ನೂ, ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, “ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದಾವೀದನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರೆಂಬುವರನ್ನು ಕರೆಯಿಸಿದನು; ಅಂತೆಯೇ ಲೇವಿಯರಾದ ಊರಿಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೋಲ್ ಮತ್ತು ಅಮ್ಮೀನಾದಾಬ್ ಎಂಬವರನ್ನೂ ಕರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಮೇಲೆ ದಾವೀದನು ಚಾದೋಕ್ ಎಬ್ಯಾತಾರರೆಂಬ ಯಾಜಕರನ್ನೂ ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್, ಅಮ್ಮೀನಾದಾಬ್ ಎಂಬ ಲೇವಿಯರನ್ನೂ ಕರೆದು ಅವರಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ದಾವೀದನು ಚಾದೋಕನು, ಅಬಿಯಾತರನು ಎಂಬ ಯಾಜಕರನ್ನೂ; ಉರೀಯೇಲನು, ಅಸಾಯನು, ಯೋಯೇಲನು, ಶೆಮಾಯನು, ಎಲೀಯೇಲನು, ಅಮ್ಮೀನಾದಾಬನು ಎಂಬ ಲೇವಿಯರನ್ನೂ ಕರೆಕಳುಹಿಸಿ ಅವರಿಗೆ, ಅಧ್ಯಾಯವನ್ನು ನೋಡಿ |
ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.