Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:12 - ಪರಿಶುದ್ದ ಬೈಬಲ್‌

12 ದಾವೀದನು ಅವರಿಗೆ, “ನೀವು ಲೇವಿಕುಲದ ನಾಯಕರು. ನೀವೂ ಉಳಿದ ಲೇವಿಯರೂ ನಿಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಅನಂತರ ಇಸ್ರೇಲಿನ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನಾನು ಅದಕ್ಕಾಗಿ ಸಿದ್ಧಮಾಡಿರುವ ಸ್ಥಳಕ್ಕೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನೀವು ಲೇವಿಯರ ಗೋತ್ರಗಳ ನಾಯಕರು; ನಾನು ಸಿದ್ಧಪಡಿಸಿದ ಸ್ಥಳಕ್ಕೆ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ನೀವು ಹಾಗು ನಿಮ್ಮ ಜೊತೆಯಲ್ಲಿ ಲೇವಿಯರೂ ನಿಮ್ಮನ್ನೇ ಶುದ್ಧಪಡಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವೂ ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು ಇಸ್ರಾಯೇಲ್ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿರುವ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನೀವು ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ್ದರಿಂದ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮಂಜೂಷವನ್ನು ನಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ, ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:12
20 ತಿಳಿವುಗಳ ಹೋಲಿಕೆ  

ಪಸ್ಕದ ಕುರಿಮರಿಯನ್ನು ವಧಿಸಿ ಯೆಹೋವನಿಗಾಗಿ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಿಮ್ಮ ಸೋದರರಾದ ಇಸ್ರೇಲರಿಗೆ ಕುರಿಮರಿಯನ್ನು ಸಿದ್ಧಮಾಡಿರಿ. ಯೆಹೋವನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿರಿ. ಆತನು ಮೋಶೆಯ ಮೂಲಕ ನಮಗೆ ಈ ವಿಧಿನಿಯಮಗಳನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.


ಆ ಬಳಿಕ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ದರು. ಯಾಜಕರೂ ಲೇವಿಯರೂ ನಾಚಿಕೆಯಿಂದ ತಮ್ಮನ್ನು ಸೇವೆಗಾಗಿ ಸಿದ್ಧಪಡಿಸಿಕೊಂಡು ಸರ್ವಾಂಗಹೋಮಕ್ಕಾಗಿ ಕಾಣಿಕೆಗಳನ್ನು ಯೆಹೋವನ ಮಂದಿರಕ್ಕೆ ತಂದರು.


ಆಗ ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಮಾಡಿಕೊಂಡರು. ಇಸ್ರೇಲರ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ತಮ್ಮನ್ನು ಸಿದ್ಧಪಡಿಸಿಕೊಂಡರು.


ನಿನ್ನ ಸತ್ಯದ ಮೂಲಕ ನೀನು ಇವರನ್ನು ನಿನ್ನ ಸೇವೆಗೆ ಸಿದ್ಧಪಡಿಸು. ನಿನ್ನ ವಾಕ್ಯವು ಸತ್ಯವಾದದ್ದು.


ಈ ಭೂಮಿಯು ಚಾದೋಕನ ಸಂತತಿಯವರಿಗಿರುವದು. ಆ ಜನರು ನನ್ನ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನ್ನನ್ನು ಬಿಟ್ಟು ತೊಲಗಿದರೂ ಇವರು ನನಗೆ ಸೇವೆಮಾಡುವದನ್ನು ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನ್ನನ್ನು ಬಿಟ್ಟುಹೋಗಲಿಲ್ಲ.


ಅಲ್ಲಿ ನೆರೆದುಬಂದಿದ್ದ ಯಾಜಕರೆಲ್ಲರೂ ಯಾವ ವರ್ಗವ್ಯತ್ಯಾಸವಿಲ್ಲದೆ ಆಚಾರಕ್ಕನುಸಾರವಾಗಿ ತಮ್ಮನ್ನು ಶುದ್ಧೀಕರಿಸಿಕೊಂಡರು. ಬಳಿಕ ಅವರು ಪವಿತ್ರ ಸ್ಥಳದಿಂದ ಹೊರಬಂದು ಒಟ್ಟಾಗಿ ನಿಂತುಕೊಂಡರು.


ಇವರನ್ನು ವಿಶಿಷ್ಟಕಾರ್ಯಗಳಿಗಾಗಿ ಚೀಟುಹಾಕಿ ಆರಿಸಲಾಯಿತು. ಆರೋನನ ಸಂತತಿಯವರೂ ಯಾಜಕರೂ ಆಗಿದ್ದ ತಮ್ಮ ಸಂಬಂಧಿಕರು ಮಾಡಿದಂತೆಯೇ ಚೀಟುಹಾಕಿ ವಿಶಿಷ್ಟ ಕಾರ್ಯಗಳಿಗಾಗಿ ಇವರನ್ನು ಆರಿಸಿಕೊಳ್ಳಲಾಯಿತು. ರಾಜನಾದ ದಾವೀದನ, ಚಾದೋಕನ, ಅಹೀಮೆಲೆಕನ ಮತ್ತು ಲೇವಿಕುಲದ ನಾಯಕರ ಎದುರಿಗೆ ಚೀಟುಹಾಕಿದರು. ಹಿರಿಯ ಅಥವಾ ಕಿರಿಯ ಕುಟುಂಬಗಳೆನ್ನದೆ ಎಲ್ಲರಿಗೂ ಸಮಾನವಾಗಿ ಕೆಲಸಗಳನ್ನು ಹಂಚಿದರು.


ಎಲ್ಲಾ ಇಸ್ರೇಲರು ಜೆರುಸಲೇಮಿಗೆ ಬರಬೇಕೆಂದು ದಾವೀದನು ಪ್ರಕಟಿಸಿದನು. ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ದಾವೀದನು ಸಿದ್ಧಪಡಿಸಿದ್ದ ಸ್ಥಳಕ್ಕೆ ತಂದರು.


ದಾವೀದನಗರದಲ್ಲಿ ದಾವೀದನು ತನಗಾಗಿ ಮನೆಗಳನ್ನು ಕಟ್ಟಿಸಿದನು. ಆಮೇಲೆ ಅವನು ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಲು ಒಂದು ಸ್ಥಳವನ್ನು ಏರ್ಪಡಿಸಿ ಗುಡಾರವನ್ನು ನಿರ್ಮಿಸಿದನು.


ಈ ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು.


ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.


ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.


ಸೊಲೊಮೋನನು ಇಸ್ರೇಲರನ್ನೂ ಅಂದರೆ ನ್ಯಾಯಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಸೇನಾಧಿಪತಿಗಳನ್ನೂ ಕುಲಪ್ರಧಾನರನ್ನೂ ಕರೆಯಿಸಿ ಅವರೊಂದಿಗೆ ಗಿಬ್ಯೋನಿನ ಉನ್ನತಸ್ಥಳಕ್ಕೆ ಹೋದನು. ದೇವದರ್ಶನಗುಡಾರವು ಅಲ್ಲಿತ್ತು. ಅರಣ್ಯದಲ್ಲಿ ಇಸ್ರೇಲರು ಪ್ರಯಾಣಿಸುತ್ತಿದ್ದಾಗ ಯೆಹೋವನ ಸೇವಕನಾದ ಮೋಶೆಯು ಗುಡಾರವನ್ನು ಮಾಡಿಸಿದ್ದನು.


ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ತಂದು ಅಲ್ಲಿ ತಾನು ಅದಕ್ಕಾಗಿ ಏರ್ಪಡಿಸಿದ್ದ ಸ್ಥಳದಲ್ಲಿ ಪ್ರತಿಷ್ಠಿಸಿದನು; ಮತ್ತು ಅದಕ್ಕೆ ಗುಡಾರವನ್ನು ನಿರ್ಮಿಸಿದ್ದನು.


ದಾವೀದನಗರದಲ್ಲಿದ್ದ ಅಂದರೆ ಚೀಯೋನಿನಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ತರುವದಕ್ಕಾಗಿ ಸೊಲೊಮೋನನು ಇಸ್ರೇಲರ ಎಲ್ಲಾ ಹಿರಿಯರನ್ನು ಮತ್ತು ಕುಲಾಧಿಪತಿಗಳನ್ನು ಜೆರುಸಲೇಮಿಗೆ ಒಟ್ಟಾಗಿ ಕರೆಸಿದನು.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು