1 ಪೂರ್ವಕಾಲ ವೃತ್ತಾಂತ 15:2 - ಪರಿಶುದ್ದ ಬೈಬಲ್2 “ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರವಾದ ಸೇವೆಗಾಗಿ ನೇಮಿಸಿದ್ದಾನೆ” ಎಂದು ದಾವೀದನು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಕಾಲದಲ್ಲಿ ದಾವೀದನು - ಲೇವಿಯರು ಹೊರತಾಗಿ ಯಾರೂ ದೇವಮಂಜೂಷವನ್ನು ಹೊರಬಾರದು; ಅದನ್ನು ಹೊರುವದಕ್ಕೂ ಸದಾಕಾಲ ತನ್ನ ಸೇವೆಮಾಡುವದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ದಾವೀದನು, “ಲೇವಿಯರ ಹೊರತಾಗಿ ಮತ್ತ್ಯಾರೂ ದೇವರ ಮಂಜೂಷವನ್ನು ಹೊರಬಾರದು. ಯೆಹೋವ ದೇವರು ದೇವರ ಮಂಜೂಷವನ್ನು ಹೊರಲೂ, ಯುಗಯುಗಕ್ಕೆ ಅವರಿಗೆ ಸೇವೆಮಾಡಲೂ ಅವರನ್ನು ಆಯ್ದುಕೊಂಡಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಎಲ್ಲಾ ಇಸ್ರೇಲರಿಗೆ ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ ಯೋಷೀಯನು, “ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಸೊಲೊಮೋನನು ಕಟ್ಟಿದ ದೇವಾಲಯದೊಳಗೆ ಇಡಿರಿ. ಸೊಲೊಮೋನನು ಇಸ್ರೇಲಿನ ರಾಜನಾದ ದಾವೀದನ ಮಗ. ಆ ಪೆಟ್ಟಿಗೆಯನ್ನು ನಿಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಸ್ಥಳದಿಂದ ಸ್ಥಳಕ್ಕೆ ಹೋಗಬೇಡಿ; ನಿಮ್ಮ ದೇವರಾದ ಯೆಹೋವನ ಸೇವೆಮಾಡಿರಿ; ದೇವಜನರಾದ ಇಸ್ರೇಲರ ಸೇವೆಮಾಡಿರಿ.