1 ಪೂರ್ವಕಾಲ ವೃತ್ತಾಂತ 15:25 - ಪರಿಶುದ್ದ ಬೈಬಲ್25 ದಾವೀದನೂ ಇಸ್ರೇಲಿನ ಹಿರಿಯರೂ ಮುಖಂಡರೂ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ಹೋದರು. ಅವರು ಅದನ್ನು ಓಬೇದೆದೋಮನ ಮನೆಯಿಂದ ಹೊರತಂದರು. ಎಲ್ಲರಿಗೂ ಸಂತೋಷವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೀಗೆ ಅರಸ ದಾವೀದನು, ಇಸ್ರಯೇಲಿನ ನಾಯಕರು ಹಾಗು ಸೈನ್ಯದ ಅಧಿಕಾರಿಗಳು ನಿಬಂಧನ ಮಂಜೂಷವನ್ನು ತರಲು ಓಬೇದೆದೋಮನ ಮನೆಗೆ ಹೋದರು. ಇದನ್ನು ಒಂದು ದೊಡ್ಡ ಜಾತ್ರೆಯಂತೆಯೇ ಆಚರಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ನಿಬಂಧನ ಮಂಜೂಷವನ್ನು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಹೀಗೆಯೇ ದಾವೀದನೂ, ಇಸ್ರಾಯೇಲಿನ ಹಿರಿಯರೂ, ಸಹಸ್ರಾಧಿಪತಿಗಳೂ ಸಂತೋಷವಾಗಿ ಓಬೇದ್ ಏದೋಮನ ಮನೆಯೊಳಗಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು. ಅಧ್ಯಾಯವನ್ನು ನೋಡಿ |
“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.
ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.