1 ಪೂರ್ವಕಾಲ ವೃತ್ತಾಂತ 15:27 - ಪರಿಶುದ್ದ ಬೈಬಲ್27 ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತ ಯಾಜಕರು ಉತ್ತಮವಾದ ನಾರಿನ ನಿಲುವಂಗಿಗಳನ್ನು ಧರಿಸಿದ್ದರು. ಕೆನನ್ಯನೂ ಅವನ ಜೊತೆಯಲ್ಲಿದ್ದ ಗಾಯಕರೆಲ್ಲರೂ ಉತ್ತಮವಾದ ನಾರಿನ ಬಟ್ಟೆಗಳನ್ನು ಧರಿಸಿದ್ದರು. ದಾವೀದನೂ ಉತ್ತಮವಾದ ನಾರಿನ ಬಟ್ಟೆ ಧರಿಸಿ, ಉತ್ತಮವಾದ ನಾರಿನಿಂದ ಮಾಡಿದ ಏಫೋದನ್ನು ಅದರ ಮೇಲೆ ಧರಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯನುಡಿಸುವ ಎಲ್ಲಾ ಲೇವಿಯರೂ, ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದನು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದಾವೀದನು, ಮಂಜೂಷ ಹೊತ್ತವರು, ವಾದ್ಯ ಬಾರಿಸುವವರು ಹಾಗು ಅವರ ನಾಯಕ ಕೆನನ್ಯನು ಅತ್ಯುತ್ತಮ ನೂಲಿನಿಂದ ತಯಾರಿಸಿದ ನಿಲುವಂಗಿಗಳನ್ನು ಧರಿಸಿದ್ದರು. ದಾವೀದನು ಏಫೋದನ್ನು ಕೂಡ ಧರಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯಮಾಡುವ ಎಲ್ಲಾ ಲೇವಿಯರೂ ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದರು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ದಾವೀದನೂ, ಮಂಜೂಷವನ್ನು ಹೊರುವ ಲೇವಿಯರೂ, ಹಾಡುಗಾರರೂ, ಸಂಗೀತಗಾರರ ನಾಯಕನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿ |