Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:28 - ಪರಿಶುದ್ದ ಬೈಬಲ್‌

28 ಹೀಗೆ ಎಲ್ಲಾ ಇಸ್ರೇಲರು ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬಂದರು. ಅವರು ಕೊಂಬುಗಳನ್ನೂ ತುತ್ತೂರಿಗಳನ್ನೂ ಊದಿದರು; ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸಿದರು; ಆನಂದದಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹೀಗೆ ಎಲ್ಲಾ ಇಸ್ರಾಯೇಲ್ಯರು ಆರ್ಭಟಿಸುತ್ತಾ ಕೊಂಬು ತುತೂರಿಗಳನ್ನು ಗಟ್ಟಿಯಾಗಿ ಊದುತ್ತಾ ತಾಳಹೊಡೆಯುತ್ತಾ ಕಿನ್ನರಿ ಸ್ವರಮಂಡಲಗಳನ್ನು ಬಾರಿಸುತ್ತಾ ಯೆಹೋವನ ನಿಬಂಧನಮಂಜೂಷವನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹೀಗೆ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಆರ್ಭಟದಿಂದಲೂ, ಕೊಂಬಿನ ಶಬ್ದದಿಂದಲೂ, ತುತೂರಿಗಳಿಂದಲೂ, ತಾಳಗಳಿಂದಲೂ ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಾ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:28
16 ತಿಳಿವುಗಳ ಹೋಲಿಕೆ  

ದಾವೀದನೂ ಎಲ್ಲಾ ಇಸ್ರೇಲರೂ ದೇವರ ಮುಂದೆ ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಹೋದರು. ಹಾರ್ಪ್‌ವಾದ್ಯವನ್ನು, ಲೈರ್‌ವಾದ್ಯವನ್ನು, ತಬಲವನ್ನು, ತಾಳವನ್ನು ಮತ್ತು ತುತ್ತೂರಿಯನ್ನು ಬಾರಿಸುತ್ತಾ ಹಾಡುತ್ತಾ ದೇವರಿಗೆ ಸ್ತೋತ್ರ ಮಾಡಿದರು.


ದಾವೀದನು ಲೇವಿಯರಿಗೆ ತಮ್ಮ ಸಹೋದರರಾದ ಗಾಯಕರನ್ನು ಕರೆದುಕೊಂಡು ಬರಲು ಹೇಳಿದನು. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ತಂದು ಆನಂದಗೀತೆಗಳನ್ನು ಹಾಡುವಂತೆ ಅವರಿಗೆ ತಿಳಿಸಿದನು.


ಮುಂಭಾಗದಲ್ಲಿ ಗಾಯಕರೂ ಹಿಂಭಾಗದಲ್ಲಿ ವಾದ್ಯ ಬಾರಿಸುವವರೂ ಸುತ್ತಲು ದಮ್ಮಡಿ ಬಡಿಯುವ ಯುವತಿಯರೂ ಹೋಗುತ್ತಿದ್ದಾರೆ.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಗರಕ್ಕೆ ತರುವಾಗ ದಾವೀದನು ಮತ್ತು ಇಸ್ರೇಲರೆಲ್ಲರು ಸಂತೋಷದಿಂದ ಆರ್ಭಟಿಸಿದರು; ತುತ್ತೂರಿಯನ್ನು ಊದಿದರು.


ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು.


ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಇವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವಾಗ ತುತ್ತೂರಿ ಊದುವ ಕೆಲಸವನ್ನು ಕೊಟ್ಟನು. ಓಬೇದೆದೋಮ್ ಮತ್ತು ಯೆಹೀಯ ಒಡಂಬಡಿಕೆಯ ಪೆಟ್ಟಿಗೆಗೆ ಕಾವಲುಗಾರರಾದರು.


ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತ ಯಾಜಕರು ಉತ್ತಮವಾದ ನಾರಿನ ನಿಲುವಂಗಿಗಳನ್ನು ಧರಿಸಿದ್ದರು. ಕೆನನ್ಯನೂ ಅವನ ಜೊತೆಯಲ್ಲಿದ್ದ ಗಾಯಕರೆಲ್ಲರೂ ಉತ್ತಮವಾದ ನಾರಿನ ಬಟ್ಟೆಗಳನ್ನು ಧರಿಸಿದ್ದರು. ದಾವೀದನೂ ಉತ್ತಮವಾದ ನಾರಿನ ಬಟ್ಟೆ ಧರಿಸಿ, ಉತ್ತಮವಾದ ನಾರಿನಿಂದ ಮಾಡಿದ ಏಫೋದನ್ನು ಅದರ ಮೇಲೆ ಧರಿಸಿಕೊಂಡಿದ್ದನು.


ದಾವೀದನ ನಗರದಲ್ಲಿ ಮೆರವಣಿಗೆಯು ಬಂದಾಗ ದಾವೀದನ ಹೆಂಡತಿಯಾದ ಮೀಕಲಳು ಕಿಟಿಕಿಯಿಂದ ನೋಡಿದಳು. (ಇವಳು ಸೌಲನ ಮಗಳು.) ದಾವೀದನು ಕುಣಿಯುತ್ತಾ ಹಾಡುವದನ್ನು ಆಕೆ ಕಂಡಳು. ತನ್ನ ಗಂಡನ ಮೇಲೆ ಆಕೆಗಿದ್ದ ಗೌರವವು ಕಡಿಮೆಯಾಯಿತು. ಯಾಕೆಂದರೆ ದಾವೀದನು ಒಬ್ಬ ಸಾಮಾನ್ಯ ವ್ಯಕ್ತಿಯಂತೆ ಬುದ್ಧಿ ಇಲ್ಲದ ಕೆಲಸ ಮಾಡುತ್ತಿರುವನೆಂದು ಆಕೆಯು ಅಂದುಕೊಂಡಳು.


ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು.


ದಾವೀದನೂ ಸೇನಾಪತಿಗಳೂ ಆಸಾಫನ ಸಂತತಿಯವರನ್ನು ವಿಶೇಷವಾದ ಸೇವೆಗೆ ಪ್ರತ್ಯೇಕಿಸಿದರು. ಆಸಾಫನ ಗಂಡುಮಕ್ಕಳು ಹೇಮಾನ್ ಮತ್ತು ಯೆದುತೂನ್. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸುತ್ತಾ ದೇವರ ಸಂದೇಶವನ್ನು ಪ್ರವಾದಿಸುವುದೇ ಇವರ ಸೇವೆಯಾಗಿತ್ತು. ಈ ರೀತಿಯಾಗಿ ದೇವರ ಸೇವೆಯನ್ನು ಮಾಡಿದವರು ಯಾರೆಂದರೆ:


ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು