1 ಪೂರ್ವಕಾಲ ವೃತ್ತಾಂತ 15:29 - ಪರಿಶುದ್ದ ಬೈಬಲ್29 ದಾವೀದನ ನಗರದಲ್ಲಿ ಮೆರವಣಿಗೆಯು ಬಂದಾಗ ದಾವೀದನ ಹೆಂಡತಿಯಾದ ಮೀಕಲಳು ಕಿಟಿಕಿಯಿಂದ ನೋಡಿದಳು. (ಇವಳು ಸೌಲನ ಮಗಳು.) ದಾವೀದನು ಕುಣಿಯುತ್ತಾ ಹಾಡುವದನ್ನು ಆಕೆ ಕಂಡಳು. ತನ್ನ ಗಂಡನ ಮೇಲೆ ಆಕೆಗಿದ್ದ ಗೌರವವು ಕಡಿಮೆಯಾಯಿತು. ಯಾಕೆಂದರೆ ದಾವೀದನು ಒಬ್ಬ ಸಾಮಾನ್ಯ ವ್ಯಕ್ತಿಯಂತೆ ಬುದ್ಧಿ ಇಲ್ಲದ ಕೆಲಸ ಮಾಡುತ್ತಿರುವನೆಂದು ಆಕೆಯು ಅಂದುಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆ ಮಂಜೂಷ ಪಟ್ಟಣದೊಳಗೆ ಬರುತ್ತಿದ್ದಂತೆ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿದಳು. ದಾವೀದನು ಸಂತೋಷದಿಂದ ಕುಣಿಯುತ್ತಾ ನರ್ತಿಸುತ್ತಾ ಇದ್ದುದನ್ನು ಕಂಡಳು. ಅದನ್ನು ನೋಡಿ ಅವನ ಬಗ್ಗೆ ಅವಳಲ್ಲಿ ತಿರಸ್ಕಾರ ಭಾವ ಮೂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯೆಹೋವನ ನಿಬಂಧನ ಮಂಜೂಷವು ದಾವೀದನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಕಿನೋಡಿ ದಾವೀದನು ಕುಣಿಯುತ್ತಾ ಹಾರುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಕುಣಿಯುತ್ತಾ, ಹಾಡುತ್ತಾ ಇರುವ ಅರಸನಾದ ದಾವೀದನನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು. ಅಧ್ಯಾಯವನ್ನು ನೋಡಿ |
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆ ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವುದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವುದಿಲ್ಲ. ಅವರು ಅದನ್ನು ಜ್ಞಾಪಿಸುವುದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವುದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ.