Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:1 - ಪರಿಶುದ್ದ ಬೈಬಲ್‌

1 ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕಾಗಿ ಸಿದ್ಧಪಡಿಸಿದ್ದ ಗುಡಾರದೊಳಗೆ ಒಯ್ದು, ಅಲ್ಲಿ ಅದನ್ನು ಸ್ಥಾಪಿಸಿದರು. ದೇವರಿಗೆ ದಹನಬಲಿಗಳನ್ನೂ, ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿಸಿದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:1
14 ತಿಳಿವುಗಳ ಹೋಲಿಕೆ  

ದಾವೀದನಗರದಲ್ಲಿ ದಾವೀದನು ತನಗಾಗಿ ಮನೆಗಳನ್ನು ಕಟ್ಟಿಸಿದನು. ಆಮೇಲೆ ಅವನು ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಲು ಒಂದು ಸ್ಥಳವನ್ನು ಏರ್ಪಡಿಸಿ ಗುಡಾರವನ್ನು ನಿರ್ಮಿಸಿದನು.


ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ತಂದು ಅಲ್ಲಿ ತಾನು ಅದಕ್ಕಾಗಿ ಏರ್ಪಡಿಸಿದ್ದ ಸ್ಥಳದಲ್ಲಿ ಪ್ರತಿಷ್ಠಿಸಿದನು; ಮತ್ತು ಅದಕ್ಕೆ ಗುಡಾರವನ್ನು ನಿರ್ಮಿಸಿದ್ದನು.


ದಾವೀದನು ಅವರಿಗೆ, “ನೀವು ಲೇವಿಕುಲದ ನಾಯಕರು. ನೀವೂ ಉಳಿದ ಲೇವಿಯರೂ ನಿಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಅನಂತರ ಇಸ್ರೇಲಿನ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನಾನು ಅದಕ್ಕಾಗಿ ಸಿದ್ಧಮಾಡಿರುವ ಸ್ಥಳಕ್ಕೆ ತರಬೇಕು.


ಯೆಹೋವನೇ, ನಿನ್ನ ವಿಶ್ರಾಂತಿಯ ಸ್ಥಳದಿಂದ ಎದ್ದೇಳು. ನಿನ್ನ ಶಕ್ತಿಪೂರ್ಣವಾದ ಪೆಟ್ಟಿಗೆಯೊಂದಿಗೆ ಎದ್ದೇಳು.


ಅವನು ಸಮಾಧಾನಯಜ್ಞ ಪಶುವಿನ ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನು ಕರುಳುಗಳ ಮೇಲಿರುವ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೆಲ್ಲಾ ಹೋಮಮಾಡಬೇಕು.


ದಾವೀದನು ಯಜ್ಞಗಳನ್ನು ಸಮರ್ಪಿಸಿದ ಬಳಿಕ ಯೆಹೋವನ ಹೆಸರಿನಲ್ಲಿ ಇಸ್ರೇಲರನ್ನು ಆಶೀರ್ವದಿಸಿದನು.


ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.


ಬಳಿಕ ರಾಜನಾದ ಸೊಲೊಮೋನನೂ ಇಸ್ರೇಲಿನ ಜನರೆಲ್ಲರೂ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಿದರು.


ಲೇವಿಯ ಗಂಡುಮಕ್ಕಳು: ಗೇರ್ಷೋಮ್, ಕೆಹಾತ್ ಮತ್ತು ಮೆರಾರೀ.


ಎಲ್ಲಾ ಇಸ್ರೇಲರು ಜೆರುಸಲೇಮಿಗೆ ಬರಬೇಕೆಂದು ದಾವೀದನು ಪ್ರಕಟಿಸಿದನು. ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ದಾವೀದನು ಸಿದ್ಧಪಡಿಸಿದ್ದ ಸ್ಥಳಕ್ಕೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು