Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:14 - ಪರಿಶುದ್ದ ಬೈಬಲ್‌

14 ಯೆಹೋವನೇ ನಮ್ಮ ದೇವರು. ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ ನಮ್ಮ ದೇವನೆಂಬುದು ಪ್ರಕಟಿತ I ಆತನಿತ್ತ ತೀರ್ಪು ವಿಶ್ವವ್ಯಾಪ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:14
12 ತಿಳಿವುಗಳ ಹೋಲಿಕೆ  

ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.


ಯೆಹೋವನೇ, ನೀನೇ ನನ್ನ ದೇವರು; ನಾನು ನಿನಗೆ ಕೃತಜ್ಞತೆ ಸಲ್ಲಿಸುವೆನು. ನಾನು ನಿನ್ನನ್ನು ಘನಪಡಿಸುವೆನು!


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.


ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.


ಆತನ ಸೇವಕನಾದ ಇಸ್ರೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ಸಂತತಿಯವರೇ,


ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನನಗೆ ರಕ್ಷಣೆ ಆಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.


ಆತನ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನ್ಯಾಯನಿರ್ಣಯಗಳನ್ನೂ ಜ್ಞಾಪಿಸಿಕೊಳ್ಳಿರಿ.


ಯೆಹೋವನ ಒಡಂಬಡಿಕೆಯನ್ನು ಸದಾಕಾಲ ನೆನಪಿನಲ್ಲಿಡಿರಿ. ಆತನು ಆ ಆಜ್ಞೆಗಳನ್ನು ಸಾವಿರ ತಲೆಮಾರುಗಳಿಗೆ ಕೊಟ್ಟನು.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು