Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:2 - ಪರಿಶುದ್ದ ಬೈಬಲ್‌

2 ದಾವೀದನು ಯಜ್ಞಗಳನ್ನು ಸಮರ್ಪಿಸಿದ ಬಳಿಕ ಯೆಹೋವನ ಹೆಸರಿನಲ್ಲಿ ಇಸ್ರೇಲರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬಲಿಹೋಮಗಳ ಅರ್ಪಣೆ ಮುಗಿದ ತರುವಾಯ ದಾವೀದನು ಸರ್ವೇಶ್ವರನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು. ಅವರೆಲ್ಲರಿಗೂ ಪ್ರಸಾದವನ್ನು ಹಂಚಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಯಜ್ಞಗಳೂ ಹೋಮಗಳೂ ಸಮರ್ಪಣೆಯಾದನಂತರ ದಾವೀದನು ಇಸ್ರಾಯೇಲ್ಯರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಅವನು ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:2
17 ತಿಳಿವುಗಳ ಹೋಲಿಕೆ  

ಯಾಕೋಬನು ಫರೋಹನನ್ನು ಆಶೀರ್ವದಿಸಿದ ಬಳಿಕ ಫರೋಹನ ಸನ್ನಿಧಿಯಿಂದ ಹೊರಟುಹೋದನು.


ಮುಖ್ಯನಾದ ವ್ಯಕ್ತಿಯು ಅಲ್ಪನಾದವನಿಗೆ ಆಶೀರ್ವಾದ ಮಾಡುತ್ತಾನೆಂಬುದು ಜನರೆಲ್ಲರಿಗೂ ತಿಳಿದಿರುವ ವಿಷಯ.


ಯಾಜಕರು ಮತ್ತು ಲೇವಿಯರು ಎದ್ದುನಿಂತು ಜನರನ್ನು ಯೆಹೋವನು ಆಶೀರ್ವದಿಸುವಂತೆ ಕೇಳಿಕೊಂಡರು. ದೇವರು ಪರಲೋಕದ ತನ್ನ ಪವಿತ್ರ ನಿವಾಸಕ್ಕೆ ಬಂದ ಆ ಪ್ರಾರ್ಥನೆಗೆ ಕಿವಿಗೊಟ್ಟನು.


ಯಜ್ಞಸಮರ್ಪಣೆ ಮುಗಿದ ಬಳಿಕ ಅರಸನಾದ ಹಿಜ್ಕೀಯನೂ ಪ್ರಜೆಗಳೂ ಯೆಹೋವನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.


ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು.


ಯೆಹೋಶುವನು ಅವರನ್ನು ಆಶೀರ್ವದಿಸಿ ಬೀಳ್ಕೊಟ್ಟನು. ಅವರು ತಮ್ಮತಮ್ಮ ಮನೆಗಳಿಗೆ ಹೋದರು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.


ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.


ಅನಂತರ ಅಲ್ಲಿ ನೆರೆದಿದ್ದ ಪ್ರತಿಯೊಬ್ಬ ಇಸ್ರೇಲಿನ ಗಂಡಸಿಗೆ ಮತ್ತು ಹೆಂಗಸಿಗೆ ಒಂದು ರೊಟ್ಟಿಯನ್ನೂ ಸ್ವಲ್ಪ ಖರ್ಜೂರವನ್ನೂ ಒಣದ್ರಾಕ್ಷಿಯನ್ನೂ ಕೊಟ್ಟನು.


ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು