Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:25 - ಪರಿಶುದ್ದ ಬೈಬಲ್‌

25 ಯೆಹೋವನು ದೊಡ್ಡವನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಎಲ್ಲಾ ದೇವರುಗಳಲ್ಲಿ ಯೆಹೋವನೇ ಭಯಂಕರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ದೊಡ್ಡವನೂ ಬಹಳವಾಗಿ ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವತೆಗಳಲ್ಲಿ ಆತನೇ ಭಯಂಕರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:25
15 ತಿಳಿವುಗಳ ಹೋಲಿಕೆ  

ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು.


ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು?


ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.


“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


ಯೆಹೋವನ ಮಹಿಮೆಯನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. ಸರ್ವಜನರಲ್ಲಿ ಆತನ ಅದ್ಭುತಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.


“ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನು. ಆದ್ದರಿಂದ ಆತನಿಗಾಗಿ ನಾನು ಮಹತ್ತಾದ ಆಲಯವನ್ನು ಕಟ್ಟುವೆನು.


ಯೆಹೋವನೇ ಮಹೋನ್ನತನು. ನಮ್ಮ ದೇವರನ್ನು ಆತನ ಪವಿತ್ರ ಪರ್ವತ ಪಟ್ಟಣದಲ್ಲಿ ಜನರು ಬಹಳವಾಗಿ ಕೊಂಡಾಡುವರು.


ಯೆಹೋವನು ಎದ್ದುನಿಂತು ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು.


ಯೆಹೋವನು ಮಹೋನ್ನತನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಆತನ ಮಹತ್ಕಾರ್ಯಗಳು ಅಸಂಖ್ಯಾತವಾಗಿವೆ.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು