ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”
“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.
ಯೆಹೂದದ ಅರಸನಾದ ಹಿಜ್ಕೀಯನು ಸೇರಿಬಂದ ಜನರಿಗೆ ಒಂದು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ವಧಿಸಿ ತಿನ್ನಲು ಕೊಟ್ಟನು. ಪ್ರಧಾನರು ಒಂದು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಸೇರಿಬಂದ ಜನರಿಗೆ ಕೊಟ್ಟರು. ಎಷ್ಟೋ ಮಂದಿ ಯಾಜಕರು ಪವಿತ್ರ ಸೇವೆಗೆ ತಮ್ಮನ್ನು ಶುದ್ಧಪಡಿಸಿಕೊಂಡರು.
ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು.
ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು.
ತಿರುಗಿ ಯೆಹೋವನು ನನಗೆ ಮತ್ತೆ ಹೇಳಿದ್ದೇನೆಂದರೆ, “ಗೋಮೆರಳಿಗೆ ಅನೇಕ ಪ್ರಿಯತಮರಿದ್ದಾರೆ, ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷಿಯ ಉಂಡೆಗಳನ್ನು ತಿನ್ನಲು ಆಶಿಸುತ್ತಾರೆ.”
ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.