1 ಪೂರ್ವಕಾಲ ವೃತ್ತಾಂತ 16:30 - ಪರಿಶುದ್ದ ಬೈಬಲ್30 ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು! ಆದರೆ ಆತನು ಅದನ್ನು ಬಲವಾದ ಅಸ್ತಿವಾರಗಳಲ್ಲಿ ನಿರ್ಮಿಸಿದ್ದರಿಂದ ಅದು ಕದಲದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸರ್ವೇಶನಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I ಕದಲದ ಸ್ಥಿರತೆಯನು ಇತ್ತಿಹನೀ ಧರೆಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ನಡುಗಿರಿ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ. ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.