Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:31 - ಪರಿಶುದ್ದ ಬೈಬಲ್‌

31 ಭೂಮ್ಯಾಕಾಶಗಳು ಹರ್ಷಿಸಲಿ! “ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ” ಎಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31-32 “ಹರ್ಷಿಸಲಿ ಆಕಾಶ, ಸಂತೋಷಿಸಲಿ ಭೂಲೋಕ I ಗರ್ಜಿಸಲಿ ಸಮುದ್ರ ಮತ್ತು ಅದರೊಳಿರುವುದೆಲ್ಲ I ಸಾರಲಿ ರಾಷ್ಟ್ರಗಳಿಗೆ ಸರ್ವೇಶ್ವರ ರಾಜನೆಂದು I ಧರೆಗೆ ನ್ಯಾಯತೀರಿಸಲು ಖಂಡಿತ ಬರುವನೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಕಾಶವು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ. ಯೆಹೋವ ದೇವರು ಆಳುತ್ತಾರೆಂದು ಜನಾಂಗಗಳಲ್ಲಿ ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:31
19 ತಿಳಿವುಗಳ ಹೋಲಿಕೆ  

ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು.


ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ! ನಮ್ಮ ದೇವರಾದ ಪ್ರಭುವು ಆಳಲಾರಂಭಿಸಿದ್ದಾನೆ. ಆತನು ಸರ್ವಶಕ್ತನಾಗಿದ್ದಾನೆ.


ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.


ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.


ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.


ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷಮಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ!


ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”


ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ:


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.


ನನ್ನ ದೇವರೇ, ನನ್ನ ರಾಜನೇ, ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.


ಯೆಹೋವನೇ, ನಿನ್ನ ಮಹತ್ಕಾರ್ಯಗಳ ಕುರಿತು ಆಕಾಶಮಂಡಲವು ಸ್ತುತಿಸುತ್ತಿದೆ. ಪರಿಶುದ್ಧರ ಸಭೆಯು ಅವುಗಳ ಕುರಿತು ಹಾಡಿಕೊಂಡಾಡುವುದು.


ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು. ಗಗನವು ಆತನ ಕೈಕೆಲಸವನ್ನು ತಿಳಿಸುವುದು.


ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು! ಆದರೆ ಆತನು ಅದನ್ನು ಬಲವಾದ ಅಸ್ತಿವಾರಗಳಲ್ಲಿ ನಿರ್ಮಿಸಿದ್ದರಿಂದ ಅದು ಕದಲದು.


ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು