Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:33 - ಪರಿಶುದ್ದ ಬೈಬಲ್‌

33 ಯೆಹೋವನ ಸನ್ನಿಧಿಯಲ್ಲಿ ಅಡವಿಯ ಮರಗಳು ಸಂತೋಷದಿಂದ ಗಾನಮಾಡಲಿ. ಯಾಕೆಂದರೆ ಆತನು ಬರುತ್ತಿದ್ದಾನೆ. ಲೋಕಕ್ಕೆ ನ್ಯಾಯತೀರಿಸಲು ಬರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಉಲ್ಲಾಸಿಸಲಿ ಹೊಲಗದ್ದೆಗಳು ಪೈರುಪಚ್ಚೆಗಳು I ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ. ದೇವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:33
13 ತಿಳಿವುಗಳ ಹೋಲಿಕೆ  

ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.


ಪ್ರಿಯ ಸ್ನೇಹಿತರೇ, ಇವುಗಳಿಗಾಗಿಯೇ ನಾವು ಎದುರುನೋಡುತ್ತಿದ್ದೇವೆ. ಆದ್ದರಿಂದ ನೀವು ಪಾಪವಿಲ್ಲದವರಾಗಿರಲು ಮತ್ತು ತಪ್ಪಿಲ್ಲದವರಾಗಿರಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿರಿ. ದೇವರೊಂದಿಗೆ ಸಮಾಧಾನದಿಂದಿರಲು ಪ್ರಯತ್ನಿಸಿರಿ.


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ಪ್ರಭುವಾದ ಯೇಸು ಪ್ರತ್ಯಕ್ಷನಾದಾಗ ಇದು ಸಂಭವಿಸುತ್ತದೆ. ಆತನು ತನಗೆ ದೊರೆಯ ಬೇಕಾದ ವೈಭವವನ್ನು ಸ್ವೀಕರಿಸಲು ತನ್ನ ಪರಿಶುದ್ಧ ಜನರೊಂದಿಗೆ ಪ್ರತ್ಯಕ್ಷನಾಗುತ್ತಾನೆ. ಆತನನ್ನು ನಂಬಿದ ಜನರೆಲ್ಲರೂ ಆತನನ್ನು ಕಂಡು ಆಶ್ಚರ್ಯಚಕಿತರಾಗುವರು. ನಾವು ಹೇಳಿದ್ದನ್ನು ನಂಬಿದ ನೀವೆಲ್ಲರೂ ವಿಶ್ವಾಸಿಗಳ ಆ ಸಮೂಹದಲ್ಲಿರುವಿರಿ.


ಸಮುದ್ರವೂ ಅದರೊಳಗಿರುವದೆಲ್ಲವೂ ಆರ್ಭಟಿಸಲಿ, ಹೊಲಗದ್ದೆಗಳು ತಮ್ಮ ಹರ್ಷವನ್ನು ವ್ಯಕ್ತಪಡಿಸಲಿ.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಸದಾಕಾಲಕ್ಕೂ ಇರುವದು.


“ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.


ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.


ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ.


ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು