1 ಪೂರ್ವಕಾಲ ವೃತ್ತಾಂತ 16:34 - ಪರಿಶುದ್ದ ಬೈಬಲ್34 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಸದಾಕಾಲಕ್ಕೂ ಇರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು. ಅಧ್ಯಾಯವನ್ನು ನೋಡಿ |
ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.