1 ಪೂರ್ವಕಾಲ ವೃತ್ತಾಂತ 16:38 - ಪರಿಶುದ್ದ ಬೈಬಲ್38 ಅವರೊಂದಿಗೆ ಸೇವೆಮಾಡಲು ಓಬೇದೆದೋಮನನ್ನೂ ಇತರ ಅರವತ್ತೆಂಟು ಮಂದಿ ಲೇವಿಯರನ್ನೂ ಅಲ್ಲಿರಿಸಿದನು. ಓಬೇದೆದೋಮ್ ಮತ್ತು ಹೋಸ ಎಂಬವರು ಕಾವಲುಗಾರರಾಗಿದ್ದರು. ಓಬೇದೆದೋಮನು ಯೆದುತೂನನ ಮಗನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಯೆದುತೂನನ ಮಗ ಓಬೇದೆದೋಮನೂ ಅವನ ಗೋತ್ರದ ಅರವತ್ತ ಎಂಟು ಜನರೂ ಅವರಿಗೆ ಸಹಾಯಕರು ಆಗಿದ್ದರು. ಹೋಸ ಮತ್ತು ಓಬೇದೆದೋಮರು ದ್ವಾರಪಾಲಕರ ಮೇಲ್ವಿಚಾರಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಬಾಗಲುಕಾಯುವದಕ್ಕೋಸ್ಕರ ಯೆದುತೂನನ ಮಗನಾದ ಓಬೇದೆದೋಮ್ ಹೋಸ ಇವರನ್ನೂ ಇವರ ಅರುವತ್ತೆಂಟು ಮಂದಿ ಸಹೋದರರನ್ನೂ ಅಲ್ಲೇ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಓಬೇದ್ ಏದೋಮ್ ಮತ್ತು ಅವನ ಸಹಚರರಾದ ಅರವತ್ತೆಂಟು ಮಂದಿಯೂ, ದ್ವಾರಪಾಲಕರಾದ ಯೆದುತೂನನ ಮಗ ಓಬೇದ್ ಎದೋಮ್ ಮತ್ತು ಹೋಸ ನೇಮಕವಾಗಿದ್ದರು. ಅಧ್ಯಾಯವನ್ನು ನೋಡಿ |