1 ಪೂರ್ವಕಾಲ ವೃತ್ತಾಂತ 16:40 - ಪರಿಶುದ್ದ ಬೈಬಲ್40 ಪ್ರತಿ ಮುಂಜಾನೆ ಮತ್ತು ಸಂಧ್ಯಾಕಾಲಗಳಲ್ಲಿ ಚಾದೋಕನು ಮತ್ತು ಇತರ ಯಾಜಕರು ಸರ್ವಾಂಗಹೋಮವನ್ನು ಯಜ್ಞವೇದಿಕೆಯ ಮೇಲೆ ಸಮರ್ಪಿಸುತ್ತಿದ್ದರು. ಇಸ್ರೇಲರಿಗೆ ಕೊಡಲ್ಪಟ್ಟಿದ್ದ ಕಟ್ಟಳೆಗಳಿಗನುಸಾರವಾಗಿ ಅವರು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಬಲಿಪೀಠದ ಮೇಲೆ ಪ್ರತೀದಿನ ಮುಂಜಾನೆ ಹಾಗು ಸಂಜೆ ದಹನಬಲಿಯರ್ಪಿಸಬೇಕಾಗಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅವರು ಪ್ರತಿದಿನವೂ ಪ್ರಾತಃಕಾಲಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲ್ಯರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಯೆಹೋವ ದೇವರು ಇಸ್ರಾಯೇಲಿಗೆ ಆಜ್ಞಾಪಿಸಿದ ಮೋಶೆಯ ನಿಯಮದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡಲೂ ಅವರು ಪ್ರತಿದಿನವೂ ಉದಯಕಾಲದಲ್ಲಿ ಮತ್ತು ಸಾಯಂಕಾಲದಲ್ಲಿ ದಹನಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿ |
ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.