41-42 ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುತ್ತೂರಿಯನ್ನೂದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು.
ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.
ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.
ಯೆಹೋಷಾಫಾಟನು ಜನರ ಸಲಹೆಗಳನ್ನು ಕೇಳಿದನು; ಯೆಹೋವನನ್ನು ಸ್ತುತಿಸಲು ಗಾಯಕರನ್ನು ಆರಿಸಿದನು; ಯಾಕೆಂದರೆ ಆತನು ಪರಿಶುದ್ಧನು ಮತ್ತು ಅದ್ಭುತಸ್ವರೂಪನು. ಅವರು ಸೈನ್ಯದ ಮುಂದುಗಡೆಯಲ್ಲಿ ಹೋಗುತ್ತಾ ಆತನಿಗೆ ಸ್ತುತಿಗೀತೆಯನ್ನು ಹಾಡಿದರು. ಆ ಗಾಯಕರು, “ಯೆಹೋವನಿಗೆ ಸ್ತೋತ್ರಮಾಡಿರಿ. ಆತನ ಕರುಣೆಯು ನಿರಂತರವಾದದ್ದು” ಎಂದು ಹಾಡಿದರು.
ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
ಒಳಗಿನ ಪ್ರಾಕಾರದಲ್ಲಿ ಎರಡು ಕೋಣೆಗಳಿದ್ದವು. ಒಂದು ಉತ್ತರದ ದ್ವಾರದ ಬಳಿಯಲ್ಲಿ ದಕ್ಷಿಣಕ್ಕೆ ಅಭಿಮುಖವಾಗಿತ್ತು. ಇನ್ನೊಂದು ದಕ್ಷಿಣದ ದ್ವಾರದ ಬಳಿಯಲ್ಲಿದ್ದು ಉತ್ತರಕ್ಕೆ ಅಭಿಮುಖವಾಗಿತ್ತು.