Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:8 - ಪರಿಶುದ್ದ ಬೈಬಲ್‌

8 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಲ್ಲಿಸಿ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ, ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:8
13 ತಿಳಿವುಗಳ ಹೋಲಿಕೆ  

ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.


ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಸದಾಕಾಲಕ್ಕೂ ಇರುವದು.


ಈಗ ಅವನು ದಮಸ್ಕಕ್ಕೂ ಬಂದಿದ್ದಾನೆ. ನಿನ್ನಲ್ಲಿ ನಂಬಿಕೆ ಇಡುವ ಜನರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಮಹಾಯಾಜಕರು ಅವನಿಗೆ ಕೊಟ್ಟಿದ್ದಾರೆ” ಎಂದು ಹೇಳಿದನು.


ನಿನ್ನ ನಿವಾಸವಾದ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು, ಅನ್ಯ ಸ್ಥಳದವರಾದ ಆ ಜನರು ನಿನ್ನಲ್ಲಿ ಬೇಡುವುದನ್ನೆಲ್ಲ ದಯವಿಟ್ಟು ಈಡೇರಿಸು. ಆಗ, ಇಸ್ರೇಲಿನ ಜನರಂತೆ ಭೂಲೋಕದವರೆಲ್ಲರಿಗೂ ನಿನ್ನ ಹೆಸರು ಗೊತ್ತಾಗುವುದು ಮತ್ತು ಅವರು ನಿನಗೆ ಭಯಪಡುವರು. ಈ ಆಲಯವನ್ನು ನಿನ್ನ ಗೌರವಕ್ಕಾಗಿ ನಾನು ಕಟ್ಟಿಸಿದೆನೆಂಬುದು ಆಗ ಎಲ್ಲಾ ಕಡೆಯ ಜನರಿಗೂ ತಿಳಿಯುವುದು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು!


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು