Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:1 - ಪರಿಶುದ್ದ ಬೈಬಲ್‌

1 ದಾವೀದನು ತನ್ನ ಮನೆಗೆ ಹಿಂತಿರುಗಿದ ಬಳಿಕ ಪ್ರವಾದಿಯಾದ ನಾತಾನನಿಗೆ, “ನಾನು ದೇವದಾರು ಮರಗಳಿಂದ ಮಾಡಿದ ಮನೆಯಲ್ಲಿ ವಾಸಮಾಡುತ್ತಿರುವಾಗ ದೇವರ ಒಡಂಬಡಿಕೆಯ ಪೆಟ್ಟಿಗೆಯು ಗುಡಾರದೊಳಗೆ ಇಡಲ್ಪಟ್ಟಿದೆ. ದೇವರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿರುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಅರಸ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ಯೆಹೋವನ ನಿಬಂಧನ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, ಒಂದು ದಿನ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:1
28 ತಿಳಿವುಗಳ ಹೋಲಿಕೆ  

ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿದಂದಿನಿಂದ ಈ ದಿವಸದ ತನಕ ನಾನು ಮನೆಯಲ್ಲಿ ವಾಸವಾಗಿರಲಿಲ್ಲ. ನಾನು ಗುಡಾರದಲ್ಲಿಯೇ ಇದ್ದುಕೊಂಡು ಸಂಚರಿಸುತ್ತಿದ್ದೆನು. ಇಸ್ರೇಲರ ನಾಯಕರಾಗುವದಕ್ಕೆ ನಾನು ಕೆಲವರನ್ನು ಆರಿಸಿಕೊಂಡಿದ್ದೇನೆ. ಆ ನಾಯಕರು ನನ್ನ ಜನರಿಗೆ ಕುರುಬರಂತಿದ್ದಾರೆ. ಅವರೊಂದಿಗೆ ನಾನು ಬೇರೆಬೇರೆ ಸ್ಥಳಗಳಿಗೆ ಸಂಚರಿಸುತ್ತಿದ್ದಾಗ ನಾನೆಂದೂ ನನಗೊಂದು ಆಲಯವನ್ನು ದೇವದಾರು ಮರದಿಂದ ಕಟ್ಟಲು ಕೇಳಿಕೊಂಡಿರಲಿಲ್ಲ.’


ದಾವೀದನಗರದಲ್ಲಿ ದಾವೀದನು ತನಗಾಗಿ ಮನೆಗಳನ್ನು ಕಟ್ಟಿಸಿದನು. ಆಮೇಲೆ ಅವನು ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಲು ಒಂದು ಸ್ಥಳವನ್ನು ಏರ್ಪಡಿಸಿ ಗುಡಾರವನ್ನು ನಿರ್ಮಿಸಿದನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.


“ಜನರೇ, ನೀವು ಅಂದವಾದ ಮನೆಗಳಲ್ಲಿ ವಾಸಮಾಡಲು ಇದು ತಕ್ಕ ಸಮಯವೆಂದು ಹೇಳುತ್ತೀರಿ. ನಿಮ್ಮ ಮನೆಗಳಲ್ಲಿ ಗೋಡೆಗೆ ಮರದ ಹಲಗೆಗಳನ್ನು ಹೊಡೆದಿದ್ದೀರಿ. ಆದರೆ ಯೆಹೋವನ ಮನೆಯು ಇನ್ನೂ ಹಾಳುಬಿದ್ದಿದೆ.


ನೆಬೂಕದ್ನೆಚ್ಚರನಾದ ನಾನು ಅರಮನೆಯಲ್ಲಿದ್ದೆ; ಸುಖಸಂತೋಷದಿಂದ ಇದ್ದೆ.


“ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ. ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.


ಇಸ್ರೇಲರ ಶೂರನಾದ ದೇವರಿಗೆ ಒಂದು ಆಲಯವನ್ನು ಕಟ್ಟುವೆನು” ಎಂದು ದಾವೀದನು ಹೇಳಿದನು.


ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ತಂದು ಅಲ್ಲಿ ತಾನು ಅದಕ್ಕಾಗಿ ಏರ್ಪಡಿಸಿದ್ದ ಸ್ಥಳದಲ್ಲಿ ಪ್ರತಿಷ್ಠಿಸಿದನು; ಮತ್ತು ಅದಕ್ಕೆ ಗುಡಾರವನ್ನು ನಿರ್ಮಿಸಿದ್ದನು.


ಪ್ರಾರಂಭದಿಂದ ಹಿಡಿದು ಕೊನೆಯತನಕ ದಾವೀದನು ಮಾಡಿದ ಎಲ್ಲಾ ಕಾರ್ಯಗಳನ್ನು ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ ಮತ್ತು ದರ್ಶಿಯಾದ ಗಾದ್ ಇವರ ಚರಿತ್ರೆಗಳಲ್ಲಿ ಬರೆಯಲ್ಪಟ್ಟಿವೆ.


ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.


ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು.


ರಾಜನಾದ ದಾವೀದನು ಯಾಜಕನಾದ ಚಾದೋಕನನ್ನು, ಪ್ರವಾದಿಯಾದ ನಾತಾನನನ್ನು, ಯೆಹೋಯಾದಾವನ ಮಗನಾದ ಬೆನಾಯನನ್ನು ಮತ್ತು ರಾಜನ ಎಲ್ಲಾ ಅಧಿಕಾರಿಗಳನ್ನು ಅವನೊಂದಿಗೆ ಕಳುಹಿಸಿದನು. ಅವರು ಸೊಲೊಮೋನನನ್ನು ರಾಜನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿದರು.


ಸೇವಕರು ರಾಜನಿಗೆ, “ಪ್ರವಾದಿಯಾದ ನಾತಾನನು ಬಂದಿರುವನು” ಎಂದು ಹೇಳಿದರು. ಆಗ ನಾತಾನನು ಪ್ರವೇಶಿಸಿ, ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು.


ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.


ಯೆಹೋವನು ಪ್ರವಾದಿಯಾದ ನಾತಾನನ ಮೂಲಕವಾಗಿ ಸಂದೇಶವನ್ನು ಕಳುಹಿಸಿದನು. ಯೆಹೋವನು ಆಜ್ಞಾಪಿಸಿದಂತೆ ನಾತಾನನು ಸೊಲೊಮೋನನಿಗೆ ಯೆದೀದ್ಯನೆಂದು ಹೆಸರಿಟ್ಟನು.


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ನಾತಾನನು ದಾವೀದನ ಬಳಿಗೆ ಬಂದು, “ಒಂದು ನಗರದಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಶ್ರೀಮಂತ. ಆದರೆ ಮತ್ತೊಬ್ಬನು ತೀರಾ ಬಡವ.


ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ದೇವರು ದಾವೀದನನ್ನು ಬಹಳವಾಗಿ ಮೆಚ್ಚಿಕೊಂಡನು. ‘ಯಾಕೋಬನ ದೇವರಾದ ನಿನಗಾಗಿ ಒಂದು ಆಲಯವನ್ನು ಕಟ್ಟಲು ನನಗೆ ಅವಕಾಶಕೊಡು’ ಎಂದು ದಾವೀದನು ದೇವರನ್ನು ಕೇಳಿಕೊಂಡನು.


“ನನ್ನ ತಂದೆಯಾದ ದಾವೀದನು ಇಸ್ರೇಲಿನ ದೇವರಾದ ಯೆಹೋವನ ಮಹಿಮೆಗಾಗಿ ಒಂದು ಆಲಯವನ್ನು ನಿರ್ಮಿಸಲು ಬಹಳ ಅಪೇಕ್ಷಿಸಿದ್ದನು.


ಅದಕ್ಕೆ ನಾತಾನನು, “ನಿನ್ನ ಮನಸ್ಸಿಗೆ ಬಂದಂತೆ ಮಾಡು. ದೇವರು ನಿನ್ನೊಂದಿಗಿದ್ದಾನೆ” ಎಂದನು.


ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿದ್ದೆನು.


ಎಲ್ಲರೂ ಸೇರಿಬಂದಾಗ ದಾವೀದನು ನಿಂತು ಹೇಳಿದ್ದೇನೆಂದರೆ, “ನನ್ನ ಜನರೇ, ನನ್ನ ಸಹೋದರರೇ, ನನ್ನ ಮಾತುಗಳನ್ನು ಕೇಳಿರಿ. ನಮ್ಮ ದೇವರ ಒಡಂಬಡಿಕೆಯ ಪೆಟ್ಟಿಗೆಗೋಸ್ಕರ ಒಂದು ಯೋಗ್ಯಸ್ಥಳವನ್ನು ನಿರ್ಮಿಸಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಆ ಸ್ಥಳವು ದೇವರ ಪಾದಪೀಠವಾಗಬೇಕು. ಅದಕ್ಕಾಗಿ ನಾನು ದೇವರಿಗೆ ಆಲಯವನ್ನು ಕಟ್ಟಿಸಲು ಯೋಜನೆಯನ್ನು ಹಾಕಿದೆನು.


ಯೆಹೋವನು ಮೋಶೆಗೆ, “ಪವಿತ್ರಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು.


ದಾವೀದನು ತನ್ನ ಮಗನಾದ ಸೊಲೊಮೋನನನ್ನು ಕರೆದು ಇಸ್ರೇಲಿನ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟುವಂತೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು