Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:17 - ಪರಿಶುದ್ದ ಬೈಬಲ್‌

17 ನನ್ನ ವಂಶದವರ ವಿಷಯದಲ್ಲಿಯೂ ನೀನು ವಾಗ್ದಾನ ಮಾಡಿರುವೆ. ದೇವರೇ, ಯೆಹೋವನೇ, ನೀನು ನನ್ನನ್ನು ಒಬ್ಬ ಮಹಾವ್ಯಕ್ತಿಯೋ ಎಂಬಂತೆ ಪರಿಗಣಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರೇ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹುದೂರ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ದೇವರೇ, ಸರ್ವೇಶ್ವರಾ, ನೀವು ನನ್ನನ್ನು ಒಬ್ಬ ಮಹಾನ್ ವ್ಯಕ್ತಿಯನ್ನೋ ಎಂಬಂತೆ ಭಾವಿಸಿದಿರಿ; ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದು ಸಾಲದೆಂದೆಣಿಸಿ ನಿನ್ನ ಸೇವಕನ ಬಹುದೂರ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿದಿ. ದೇವರೇ, ಯೆಹೋವನೇ, ನೀನು ನನ್ನನ್ನು ಕುಲೀನನನ್ನೋ ಎಂಬಂತೆ ಕಟಾಕ್ಷಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಯೆಹೋವ ದೇವರೇ, ನೀವು ನನ್ನನ್ನು ಮನುಷ್ಯರಲ್ಲಿ ಅತ್ಯುನ್ನತ ವ್ಯಕ್ತಿಯಂತೆ ನೋಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:17
13 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.


ಯೆಹೋವನಿಗೆ ಇದು ಸುಲಭ ಸಾಧ್ಯ. ಮೋವಾಬ್ಯರನ್ನು ನೀವು ಸೋಲಿಸುವಂತೆ ಆತನೇ ಅವಕಾಶ ಮಾಡುತ್ತಾನೆ.


ನೀನು ಕೇಳದೆಹೋದ ಬಿನ್ನಹಗಳನ್ನು ನಾನು ನಿನಗೆ ಅನುಗ್ರಹಿಸುತ್ತೇನೆ. ನಿನ್ನ ಜೀವವಿರುವವರೆಗೆ ನೀನು ಶ್ರೀಮಂತನಾಗಿದ್ದು ಘನಮಾನವನ್ನು ಹೊಂದುವಿ. ಪ್ರಪಂಚದಲ್ಲಿ ನಿನ್ನಂತಹ ಉನ್ನತವಾದ ಬೇರೊಬ್ಬ ರಾಜನು ಇರುವುದಿಲ್ಲ.


ಅವನ ಕುಟುಂಬವನ್ನೂ ಅವನ ಪತ್ನಿಯರನ್ನೂ ನಿನಗೆ ಕೊಟ್ಟವನು ನಾನೇ. ನಿನ್ನನ್ನು ಇಸ್ರೇಲಿನ ಮತ್ತು ಯೆಹೂದದ ರಾಜನನ್ನಾಗಿ ಮಾಡಿದವನು ನಾನೇ. ಅದು ಸಾಲದು ಎನ್ನುವಂತೆ, ನಾನು ಮತ್ತಷ್ಟು ಹೆಚ್ಚಿನದನ್ನೂ ನೀಡಿದೆನು.


ನಾನು ಕೇವಲ ನಿನ್ನ ಸೇವಕನು. ನೀನು ನನ್ನ ಮೇಲೆ ಬಹಳ ದಯೆ ತೋರಿಸಿರುವೆ. ನನಗೆ ಮಾತ್ರವಲ್ಲದೆ ನೀನು ನನ್ನ ಮುಂದಿನ ಸಂತಾನದ ಬಗ್ಗೆಯೂ ಇದೇ ರೀತಿಯ ದಯಾಪರವಾದ ಮಾತುಗಳನ್ನು ಆಡಿರುವೆ. ನನ್ನ ಒಡೆಯನಾದ ಯೆಹೋವನೇ, ನರಪ್ರಾಣಿಯಾದ ನನ್ನೊಂದಿಗೆ ಇಂಥ ಮಹತ್ತಾದ ಕಾರ್ಯ ಮಾಡಬಹುದೇ?


ಆಗ ದಾವೀದನು ಪವಿತ್ರಗುಡಾರಕ್ಕೆ ಹೋಗಿ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರಾದ ಯೆಹೋವನೇ, ನೀನು ನನ್ನನ್ನೂ ನನ್ನ ಕುಟುಂಬವನ್ನೂ ಎಷ್ಟೋ ಆಶೀರ್ವದಿಸಿರುವೆ. ನೀನು ಯಾಕೆ ಹೀಗೆ ಮಾಡಿದಿಯೊ ನನಗೆ ತಿಳಿಯುತ್ತಿಲ್ಲ.


ನೀನು ನನಗೆಷ್ಟೋ ಸಹಾಯ ಮಾಡಿರುವೆ. ನಾನು ಕೇವಲ ನಿನ್ನ ಸೇವಕನಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು