Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:18 - ಪರಿಶುದ್ದ ಬೈಬಲ್‌

18 ನೀನು ನನಗೆಷ್ಟೋ ಸಹಾಯ ಮಾಡಿರುವೆ. ನಾನು ಕೇವಲ ನಿನ್ನ ಸೇವಕನಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ಅವನು ತನಗುಂಟಾದ ಘನತೆಯನ್ನು ಕುರಿತು ಇನ್ನೇನು ಹೇಳಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀವು ನಿಮ್ಮ ದಾಸ ದಾವೀದನನ್ನು ಚೆನ್ನಾಗಿ ಬಲ್ಲಿರಿ; ನಾನು ನನ್ನ ಘನತೆಯನ್ನು ಕುರಿತು ಇನ್ನೇನು ಹೇಳಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ; ಅವನು ತನಗುಂಟಾದ ಘನತೆಯನ್ನು ಕುರಿತು ಇನ್ನೇನು ಹೇಳಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನಿಮ್ಮ ಸೇವಕನ ಘನತೆಯ ನಿಮಿತ್ತ, ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:18
8 ತಿಳಿವುಗಳ ಹೋಲಿಕೆ  

ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ಸಂಪೂರ್ಣವಾಗಿ ತಿಳಿದುಕೊಂಡಿರುವೆ.


ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ನನ್ನ ವಂಶದವರ ವಿಷಯದಲ್ಲಿಯೂ ನೀನು ವಾಗ್ದಾನ ಮಾಡಿರುವೆ. ದೇವರೇ, ಯೆಹೋವನೇ, ನೀನು ನನ್ನನ್ನು ಒಬ್ಬ ಮಹಾವ್ಯಕ್ತಿಯೋ ಎಂಬಂತೆ ಪರಿಗಣಿಸಿರುವೆ.


ಯೆಹೋವನೇ, ನಿನ್ನ ಚಿತ್ತಕ್ಕನುಸಾರವಾಗಿ ಇಂಥ ಮಹತ್ಕಾರ್ಯವನ್ನು ನೀನು ನನಗೋಸ್ಕರ ಮಾಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು