Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:20 - ಪರಿಶುದ್ದ ಬೈಬಲ್‌

20 ಯೆಹೋವನೇ, ನಿನಗೆ ಸಮಾನರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಬೇರೆ ದೇವರಿಲ್ಲ. ಇಂಥ ಮಹತ್ಕಾರ್ಯ ಮಾಡುವ ದೇವರ ಬಗ್ಗೆ ನಾವು ಕೇಳಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ಬೇರೆ ದೇವರೇ ಇಲ್ಲವೆಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರಾ, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದಂಥವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು, ಬೇರಾವ ದೇವರೂ ಇಲ್ಲ ಎಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಯೆಹೋವ ದೇವರೇ, ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:20
26 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.


“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡೆಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.


ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.


ಯೆಹೋವನೆಂಬ ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನೀನು ಬಟ್ಟೆಗಳನ್ನು ಧರಿಸಿಕೊಳ್ಳುವಂತೆ ಮಾಡಿದವನು ನಾನೇ. ಆದರೂ ನೀನು ನನ್ನನ್ನು ತಿಳಿದಿಲ್ಲ.


ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.


ಪರಿಶುದ್ಧನಾದ ದೇವರು ಹೇಳುವುದೇನೆಂದರೆ: “ನನ್ನನ್ನು ಯಾರಿಗಾದರೂ ಹೋಲಿಸಲು ಸಾಧ್ಯವೇ? ನನಗೆ ಸಮಾನರು ಯಾರೂ ಇಲ್ಲ.”


ದೇವರನ್ನು ಬೇರೆ ಯಾವುದಕ್ಕಾದರೂ ಹೋಲಿಸಬಹುದೇ? ದೇವರ ಚಿತ್ತವನ್ನು ಬರೆಯಬಹುದೇ?


ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. ನೀನು ನಮ್ಮ ಸಂಪೂರ್ಣಭರವಸೆಗೆ ಯೋಗ್ಯನಾಗಿರುವೆ.


ಪರಲೋಕದಲ್ಲಿ ಯಾವನೂ ಯೆಹೋವನಿಗೆ ಸಮಾನನಲ್ಲ. ಯಾವ ದೇವರುಗಳನ್ನೂ ಯೆಹೋವನಿಗೆ ಹೋಲಿಸಲಾಗದು.


ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. ನೀನು ಮಾಡಿರುವ ಕಾರ್ಯಗಳನ್ನು ಬೇರೆ ಯಾರೂ ಮಾಡಲಾರರು.


ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.


ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.


“ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಆತನು ಮೋಡಗಳ ಮೇಲೆ ಮಹಿಮಾರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿಮ್ಮ ಸಹಾಯಕ್ಕೆ ಬರುವನು.


“ಆದ್ದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ.


ಯೆಹೋವನು ನಿಮಗೆ ಇವುಗಳನ್ನು ತೋರಿಸಿದ್ದಾನೆ, ಯಾಕೆಂದರೆ ಆತನೇ ದೇವರೆಂದೂ ಆತನಲ್ಲದೆ ಬೇರೆ ಯಾವ ದೇವರಿಲ್ಲವೆಂದೂ ನೀವು ತಿಳಿದುಕೊಳ್ಳಬೇಕೆಂಬುದು ಆತನ ಉದ್ದೇಶವಾಗಿತ್ತು.


ನಾನು, ‘ಯೆಹೋವನೇ, ನನ್ನ ಒಡೆಯನೇ, ನಾನು ನಿನ್ನ ಸೇವಕ. ನಿನ್ನ ತ್ರಾಣವುಳ್ಳ ಹಸ್ತದಿಂದ ಮಾಡಿದ ಪರಾಕ್ರಮದ ಕಾರ್ಯಗಳನ್ನು ನೀನು ನನಗೆ ಸ್ವಲ್ಪ ಮಟ್ಟಿಗೆ ತೋರಿಸಿರುವೆ. ನೀನು ಮಾಡಿದ ಮಹಾಕೃತ್ಯಗಳನ್ನು ಮಾಡಲು ಪರಲೋಕದ ಅಥವಾ ಭೂಲೋಕದ ಯಾವ ದೇವರುಗಳಿಗೂ ಸಾಧ್ಯವಿಲ್ಲ.


ಈಜಿಪ್ಟಿನವರು ತಾವು ಇಸ್ರೇಲರಿಗಿಂತಲೂ ಉತ್ತಮರೆಂದು ಭಾವಿಸಿಕೊಂಡಿದ್ದರು. ಆದರೆ ಯೆಹೋವನು ಅವರನ್ನು ತಗ್ಗಿಸಿದ್ದರಿಂದ ಎಲ್ಲಾ ದೇವರುಗಳಲ್ಲಿ ಆತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡೆನು” ಎಂದು ಹೇಳಿದನು.


ಅದಕ್ಕೆ ಫರೋಹನು, “ನಾಳೆ” ಅಂದನು. ಮೋಶೆ, “ನೀನು ಹೇಳಿದಂತೆಯೇ ಆಗುವುದು. ನಮ್ಮ ದೇವರಾದ ಯೆಹೋವನಿಗೆ ಸಮಾನನಾದ ದೇವರೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಯೆಹೋವನೇ, ನಿನ್ನ ಚಿತ್ತಕ್ಕನುಸಾರವಾಗಿ ಇಂಥ ಮಹತ್ಕಾರ್ಯವನ್ನು ನೀನು ನನಗೋಸ್ಕರ ಮಾಡಿರುವೆ.


ಇಸ್ರೇಲಿಗೆ ಸಮಾನವಾದ ಜನಾಂಗ ಭೂಲೋಕದಲ್ಲಿ ಎಲ್ಲಿದೆ? ನೀನು ಇಂಥ ಅದ್ಭುತಕಾರ್ಯಗಳನ್ನು ಮಾಡಿರುವುದು ಇಸ್ರೇಲ್ ಜನಾಂಗಕ್ಕಾಗಿಯೇ. ನೀನು ನಮ್ಮನ್ನು ಈಜಿಪ್ಟಿನಿಂದ ಹೊರತಂದು ಸ್ವತಂತ್ರರನ್ನಾಗಿ ಮಾಡಿದೆ. ಹೀಗೆ ನೀನು ನಿನ್ನ ಹೆಸರನ್ನು ಪ್ರಖ್ಯಾತಿಮಾಡಿದೆ. ನೀನು ನಿನ್ನ ಜನರ ಮುಂದೆ ಹೋಗುತ್ತಾ, ಅನ್ಯಜನರು ತಮ್ಮ ದೇಶವನ್ನು ಬಿಟ್ಟುಹೋಗುವಂತೆ ಮಾಡಿದೆ.


ಮಹೋನ್ನತನಾದ ಯೆಹೋವನೇ, ಭೂಲೋಕದ ಸರ್ವಾಧಿಪತಿ ನೀನೇ. ಎಲ್ಲಾ ದೇವರುಗಳಲ್ಲಿ ನೀನೇ ಮಹೋನ್ನತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು