Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:27 - ಪರಿಶುದ್ದ ಬೈಬಲ್‌

27 ನನ್ನ ಸಂತತಿಯವರನ್ನು ಆಶೀರ್ವದಿಸಿ ನಿನ್ನ ಕರುಣೆಯನ್ನು ತೋರಿಸಿದೆ. ನನ್ನ ಸಂತತಿಯವರು ಸದಾಕಾಲ ನಿನ್ನ ಸೇವೆಮಾಡುತ್ತಾರೆಂದು ನೀನು ವಾಗ್ದಾನ ಮಾಡಿರುವೆ. ಯೆಹೋವನೇ, ನೀನಾಗಿಯೇ ನನ್ನ ಸಂತತಿಯವರನ್ನು ಆಶೀರ್ವದಿಸಿದ್ದರಿಂದ ನನ್ನ ಸಂತತಿಯವರು ಸದಾಕಾಲಕ್ಕೂ ಆಶೀರ್ವಾದ ಹೊಂದಿಕೊಳ್ಳುವರು!” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ, ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ. ಅದು ನಿತ್ಯವೂ ಸೌಭಾಗ್ಯದಿಂದಿರುವುದು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಈಗ ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಅದನ್ನು ಸದಾಕಾಲ ನಿಮ್ಮ ಆಶ್ರಯದಲ್ಲಿ ಇಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀರಿ; ಸರ್ವೇಶ್ವರಾ, ನೀವು ಅದನ್ನು ಆಶೀರ್ವದಿಸಿದ್ದೀರಿ; ಅದು ನಿತ್ಯವು ಸೌಭಾಗ್ಯದಿಂದ ಇರುವುದು,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸುಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ; ಅದು ನಿತ್ಯವೂ ಸೌಭಾಗ್ಯದಿಂದಿರುವದು ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈಗ ನಿಮ್ಮ ಸೇವಕನ ಮನೆಯು ನಿಮ್ಮ ಮುಂದೆ ಶಾಶ್ವತವಾಗಿ ಇರುವ ಹಾಗೆ, ಅದನ್ನು ಆಶೀರ್ವದಿಸಲು ಸಂತೋಷಪಡಿರಿ; ಯೆಹೋವ ದೇವರೇ, ನೀವು ಆಶೀರ್ವದಿಸಿದ್ದೀರಿ, ಅದು ನಿತ್ಯ ಆಶೀರ್ವಾದ ಹೊಂದಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:27
12 ತಿಳಿವುಗಳ ಹೋಲಿಕೆ  

ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ.


ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.


ಆಗ ಇಸಾಕನು ತುಂಬ ವ್ಯಸನಗೊಂಡು ಗಡಗಡನೆ ನಡುಗುತ್ತಾ ಅವನಿಗೆ, “ನೀನು ಬರುವುದಕ್ಕಿಂತ ಮೊದಲೇ ಅಡಿಗೆಯನ್ನು ಸಿದ್ಧಪಡಿಸಿ ನನಗೆ ತಂದುಕೊಟ್ಟವನು ಯಾರು? ನಾನು ಅದನ್ನೆಲ್ಲ ತಿಂದು ಅವನನ್ನು ಆಶೀರ್ವದಿಸಿದೆನು. ಈಗ ನನ್ನ ಆಶೀರ್ವಾದವನ್ನು ಹಿಂತೆಗೆದುಕೊಳ್ಳಲಾಗದು” ಎಂದು ಹೇಳಿದನು.


ಯೆಹೋವನೇ, ನೀನೇ ದೇವರು. ಸ್ವತಃ ನೀನಾಗಿಯೇ ನನಗೆ ಇಂಥಾ ಒಳ್ಳೆಯ ವಾಗ್ದಾನಗಳನ್ನು ಮಾಡಿರುವೆ.


ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು.


“ಇಸ್ರೇಲರ ದೇವರಾದ ಯೆಹೋವನು ಇಸ್ರೇಲರ ಹನ್ನೆರಡು ಕುಲಗಳನ್ನು ಮುನ್ನಡೆಸಲು ಯೆಹೂದ ಕುಲವನ್ನು ಆರಿಸಿಕೊಂಡಿದ್ದಾನೆ. ಆ ಕುಲದಿಂದ ದೇವರು ನನ್ನ ತಂದೆಯ ಕುಟುಂಬವನ್ನು ಆರಿಸಿದ್ದಾನೆ; ಆ ಕುಟುಂಬದಿಂದ ದೇವರು ಇಸ್ರೇಲರ ಅರಸನನ್ನಾಗಿ ನನ್ನನ್ನು ಆರಿಸಿಕೊಂಡಿದ್ದಾನೆ.


ನೀನು ರಾಜನಿಗೆ ಶಾಶ್ವತವಾದ ಆಶೀರ್ವಾದವನ್ನು ಕೊಟ್ಟಿರುವೆ. ಅವನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡುವನು.


ಆ ಜನರನ್ನು ಆಶೀರ್ವದಿಸಬೇಕೆಂದು ಯೆಹೋವನು ನನಗೆ ಆಜ್ಞಾಪಿಸಿದನು; ಯೆಹೋವನು ಅವರನ್ನು ಆಶೀರ್ವದಿಸಿದ್ದಾನೆ. ಅದನ್ನು ಬದಲಾಯಿಸಲು ನನಗೆ ಸಾಧ್ಯವಿಲ್ಲ.


ಆತನು ಮಾಡಿದ ವಾಗ್ದಾನದ ಪ್ರಕಾರ ಆಶೀರ್ವದಿಸುವನು. ಆಗ ನಿಮ್ಮಲ್ಲಿ ಬೇರೆ ಜನಾಂಗಗಳಿಗೆ ಸಾಲ ಕೊಡಲು ಯಥೇಚ್ಛವಾಗಿ ಹಣವಿರುವುದು. ನಿಮಗೆ ಬೇರೆಯವರಿಂದ ಹಣ ಸಾಲ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ನೀವು ಎಷ್ಟೋ ದೇಶಗಳನ್ನು ಆಳುವಿರಿ. ಆದರೆ ಆ ದೇಶಗಳು ನಿಮ್ಮನ್ನು ಆಳವು.


ಅವರನ್ನು ಕೊಂದ ಅಪರಾಧವು ಯೋವಾಬನ ಮೇಲೆಯೂ ಅವನ ಕುಟುಂಬದ ಮೇಲೆಯೂ ಶಾಶ್ವತವಾಗಿರಲಿ. ಆದರೆ ದಾವೀದನನ್ನೂ ಅವನ ಸಂತತಿಯವರನ್ನೂ ಅವನ ಸಿಂಹಾಸನವನ್ನೂ ಯೆಹೋವನು ಶಾಶ್ವತವಾಗಿ ಆಶೀರ್ವದಿಸಲಿ” ಎಂದು ಹೇಳಿದನು.


ಆದರೆ ಯೆಹೋವನು ನನ್ನನ್ನು ಆಶೀರ್ವದಿಸುತ್ತಾನೆ. ಆತನು ದಾವೀದನ ಸಿಂಹಾಸನವನ್ನು ಎಂದೆಂದಿಗೂ ಸಂರಕ್ಷಿಸುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು