10 ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕೆಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು.
10 (ತೋವಿಗೂ ಹದರೆಜೆರನಿಗೂ ವಿರೋಧವಿತ್ತು). ದಾವೀದನು ಹದರೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ವಿಧವಿಧವಾದ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.
10 ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.
ಆಗ ತೋವಿಯು ತನ್ನ ಮಗನಾದ ಯೋರಾಮನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾಮನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾಮನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.
ಆ ಸಮಯದಲ್ಲಿ ಬಲದಾನ್ ಎಂಬವನ ಮಗನಾದ ಮೆರೋದಕಬಲದಾನ್ ಎಂಬವನು ಬಾಬಿಲೋನಿನ ಅರಸನಾಗಿದ್ದನು. ಅವನಿಗೆ ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂಬ ವರ್ತಮಾನ ತಲುಪಿದ್ದರಿಂದ ಅವನು ಹಿಜ್ಕೀಯನಿಗೆ ಒಂದು ಪತ್ರವನ್ನೂ ಜೊತೆಗೆ ಬಹುಮಾನಗಳನ್ನೂ ತನ್ನ ದೂತರ ಸಂಗಡ ಕಳುಹಿಸಿದನು.
ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕಠಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧದ್ರವ್ಯವನ್ನೂ ಅಪರಿಮಿತವಾದ ಬಂಗಾರವನ್ನೂ ವಜ್ರವೈಢೂರ್ಯಗಳನ್ನೂ ಹೇರಿಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು.
ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.