Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:11 - ಪರಿಶುದ್ದ ಬೈಬಲ್‌

11 ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು ಮೋವಾಬ್ಯರು ಅಮ್ಮೋನಿಯರು ಫಿಲಿಷ್ಟಿಯರು ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:11
20 ತಿಳಿವುಗಳ ಹೋಲಿಕೆ  

“ಚೀಯೋನ್ ಕುಮಾರಿಯೇ ಎದ್ದೇಳು, ಆ ಜನರನ್ನು ಪುಡಿಮಾಡು! ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವೆ. ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವೆ. ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವೆ.”


ಯೆಹೋವದೇವರ ಆಲಯಕ್ಕೆ ಸೊಲೊಮೋನನು ಮಾಡಬೇಕಾಗಿದ್ದ ಕೆಲಸವೆಲ್ಲವೂ ಮುಗಿಯಿತು. ದಾವೀದನು ದೇವಾಲಯಕ್ಕಾಗಿ ಕೊಟ್ಟಿದ್ದ ವಸ್ತುಗಳನ್ನೆಲ್ಲಾ ಸೊಲೊಮೋನನು ತಂದಿರಿಸಿದನು; ಬೆಳ್ಳಿಬಂಗಾರಗಳಿಂದ ಮಾಡಿದ ಸಾಮಾನುಗಳನ್ನು ಸೊಲೊಮೋನನು ದೇವಾಲಯದ ಭಂಡಾರದ ಕೋಣೆಗಳಲ್ಲಿ ಇಡಿಸಿದನು.


ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.


ಅಹೀಯನು ಲೇವಿ ಕುಲದವನಾಗಿದ್ದನು. ಇವನು ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಯಾಗಿದ್ದನು. ಅಲ್ಲದೆ ಪವಿತ್ರ ಸಾಮಾಗ್ರಿಗಳನ್ನು ಇಡುವ ಸ್ಥಳದ ಮೇಲೆಯೂ ಇವನು ಅಧಿಕಾರಿಯಾಗಿದ್ದನು.


“ಸೊಲೊಮೋನನೇ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಮೂರು ಸಾವಿರದ ಏಳುನೂರೈವತ್ತು ಟನ್ ಬಂಗಾರ, ಮೂವತ್ತೇಳು ಸಾವಿರದ ಐನೂರು ಟನ್ ಬೆಳ್ಳಿ ಮತ್ತು ತೂಕ ಮಾಡಲಾಗದಷ್ಟು ತಾಮ್ರ ಮತ್ತು ಕಬ್ಬಿಣವನ್ನು ಕೂಡಿಸಿಟ್ಟಿದ್ದೇನೆ. ಅಲ್ಲದೆ ಮರಗಳನ್ನು ಮತ್ತು ಕಲ್ಲುಗಳನ್ನು ಕೊಟ್ಟಿರುತ್ತೇನೆ. ಸೊಲೊಮೋನನೇ, ನೀನು ಇವುಗಳಿಗೆ ಇನ್ನೂ ಕೂಡಿಸು.


ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.


ಯೆಹೋವನ ದೇವಾಲಯಕ್ಕಾಗಿ ರಾಜನಾದ ಸೊಲೊಮೋನನು ಮಾಡಬೇಕೆಂದಿದ್ದ ಕಾರ್ಯವನ್ನು ಮುಗಿಸಿದನು. ಈ ವಿಶೇಷ ಕಾರ್ಯಕ್ಕಾಗಿ ತನ್ನ ತಂದೆಯಾದ ದಾವೀದನು ಮೀಸಲಾಗಿಟ್ಟಿದ್ದ ವಸ್ತುಗಳನ್ನೆಲ್ಲ ರಾಜನಾದ ಸೊಲೊಮೋನನು ಪಡೆದುಕೊಂಡು ದೇವಾಲಯದೊಳಕ್ಕೆ ತಂದನು. ಅವನು ಬೆಳ್ಳಿಬಂಗಾರಗಳನ್ನು ಯೆಹೋವನ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ದಾವೀದನು ಎಲ್ಲ ಕುರಿಗಳನ್ನು ಮತ್ತು ದನಗಳನ್ನು ತೆಗೆದುಕೊಂಡನು. ಈ ಪಶುಗಳು ಮುಂದೆ ಹೋಗುವಂತೆ ದಾವೀದನ ಜನರು ಮಾಡಿದರು. ದಾವೀದನ ಜನರು, “ಅವು ದಾವೀದನ ಕೊಡುಗೆಗಳು” ಎಂದು ಹೇಳಿದರು.


ದಾವೀದನು ಈಜಿಪ್ಟಿನವನನ್ನು, “ನಿಮ್ಮ ಒಡೆಯನು ಯಾರು? ನೀನು ಬಂದಿರುವುದು ಎಲ್ಲಿಂದ?” ಎಂದು ಕೇಳಿದನು. ಈಜಿಪ್ಟಿನವನು, “ನಾನು ಒಬ್ಬ ಈಜಿಪ್ಟಿನವನು ನಾನು ಒಬ್ಬ ಅಮಾಲೇಕ್ಯನ ಗುಲಾಮನು. ಮೂರು ದಿನಗಳ ಹಿಂದೆ ನಾನು ಅಸ್ವಸ್ಥನಾಗಿದ್ದರಿಂದ ನಮ್ಮ ಒಡೆಯನು ನನ್ನನ್ನು ಬಿಟ್ಟುಹೋದನು.


ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ಎಲ್ಲಾ ವಸ್ತುಗಳು ಯೆಹೋವನ ಸ್ವತ್ತಾಗಿವೆ. ಆದ್ದರಿಂದ ಅವುಗಳನ್ನು ಆತನ ಭಂಡಾರಕ್ಕೆ ಸೇರಿಸಬೇಕು” ಎಂದು ಆಜ್ಞಾಪಿಸಿದನು.


ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ,


ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕೆಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು.


ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು.


ಬಳಿಕ ಇಸ್ರೇಲರು ಇಡೀ ನಗರವನ್ನು ಸುಟ್ಟು ಹಾಕಿದರು. ಅವರು ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ವಸ್ತುಗಳನ್ನು ಬಿಟ್ಟು ನಗರದಲ್ಲಿನ ಉಳಿದೆಲ್ಲವನ್ನು ಸುಟ್ಟು ಹಾಕಿದರು. ಅವರು ಆ ವಸ್ತುಗಳನ್ನು ಯೆಹೋವನಿಗಾಗಿ ಉಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು