1 ಪೂರ್ವಕಾಲ ವೃತ್ತಾಂತ 18:16 - ಪರಿಶುದ್ದ ಬೈಬಲ್16 ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಹೀಟೂಬನ ಮಗ ಚಾದೋಕನು ಹಾಗು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಶವ್ಷನು ಅವನಿಗೆ ಲೇಖಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಹೀಟೂಬನ ಮಗನಾದ ಚಾದೋಕನೂ ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು; ಶವ್ಷನು ಲೇಖಕನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅಹೀಟೂಬನ ಮಗ ಚಾದೋಕನೂ, ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಕಾರ್ಯದರ್ಶಿಯಾಗಿದ್ದನು. ಅಧ್ಯಾಯವನ್ನು ನೋಡಿ |
ನೆತನೇಲನ ಮಗನಾದ ಶೆಮಾಯನು ಲೇಖಕನಾಗಿದ್ದನು. ಶೆಮಾಯನು ಲೇವಿ ಸಂತತಿಗೆ ಸೇರಿದವನಾಗಿದ್ದನು. ಇವನು ವಂಶಾವಳಿಯನ್ನು ಬರೆದಿಡುತ್ತಿದ್ದನು. ಅರಸನಾದ ದಾವೀದನ ಮತ್ತು ಯಾಜಕರಾದ ಚಾದೋಕನ, ಅಹೀಮೆಲೆಕನ ಮತ್ತು ಲೇವಿಯರ ನಾಯಕರ ಎದುರಿನಲ್ಲಿ ಸಂತತಿಯವರನ್ನು ಬರೆದನು. ಪ್ರತಿಸಲ ಚೀಟುಹಾಕಿ ಒಬ್ಬನನ್ನು ಒಂದು ಕೆಲಸಕ್ಕೆ ಆರಿಸಿದಾಗ ಅವನ ಹೆಸರನ್ನು ವಂಶಾವಳಿಯಲ್ಲಿ ಬರೆದನು. ಹೀಗೆ ಒಬ್ಬೊಬ್ಬನು ಯಾವಯಾವ ಕೆಲಸಗಳನ್ನು ಮಾಡಬೇಕೆಂದು ಎಲ್ಲರಿಗೂ ಗೊತ್ತುಪಡಿಸಿದರು. ಈ ರೀತಿಯಾಗಿ ಎಲ್ಲಾಜಾರ್ ಮತ್ತು ಈತಾಮಾರ್ ಕುಟುಂಬದವರಿಗೆ ಯಾಜಕೋದ್ಯೋಗವನ್ನು ಮಾಡುವಂತೆ ವರ್ಗಗಳಾಗಿ ಪ್ರತ್ಯೇಕಿಸಿ ಕೆಲಸಗಳನ್ನು ನೇಮಿಸಿದರು.