Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:4 - ಪರಿಶುದ್ದ ಬೈಬಲ್‌

4 ಹದದೆಜರನಿಂದ ದಾವೀದನು ಒಂದು ಸಾವಿರ ರಥಗಳನ್ನೂ ಏಳು ಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ಹದದೆಜರನ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ಆ ಕುದುರೆಗಳು ರಥಗಳನ್ನು ಎಳೆಯದಂತೆ ಮಾಡಿದನು. ಆದರೆ ನೂರು ರಥಗಳನ್ನು ಎಳೆಯಲು ಬೇಕಾಗುವಷ್ಟು ಕುದುರೆಗಳನ್ನು ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದನು; ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನ ಸಾವಿರ ರಥಗಳನ್ನೂ ಏಳುಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ವಿುಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:4
11 ತಿಳಿವುಗಳ ಹೋಲಿಕೆ  

ಹದದೆಜೆರನಿಂದ ಒಂದು ಸಾವಿರ ರಥಗಳನ್ನೂ ಒಂದು ಸಾವಿರದ ಏಳುನೂರು ಅಶ್ವಪಡೆಗಳನ್ನೂ ದಾವೀದನು ತೆಗೆದುಕೊಂಡನು. ಅವನು ಇಪ್ಪತ್ತು ಸಾವಿರ ಕಾಲಾಳು ಸೈನಿಕರನ್ನು ಸಹ ಪಡೆದನು. ದಾವೀದನು ಒಂದು ನೂರು ರಥದ ಕುದುರೆಗಳನ್ನು ಇಟ್ಟುಕೊಂಡು ಉಳಿದವುಗಳನ್ನು ಕುಂಟುವಂತೆ ಮಾಡಿದನು.


ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು. ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.


ಆದ್ದರಿಂದ ಅಸಂಖ್ಯವಾದ ರಥಗಳೂ ಕುದುರೆಗಳೂ ಸೊಲೊಮೋನನಲ್ಲಿದ್ದವು. ಅವನಲ್ಲಿ ಒಂದು ಸಾವಿರದ ನಾನೂರು ರಥಗಳು ಮತ್ತು ಹನ್ನೆರಡು ಸಾವಿರ ಕುದುರೆಗಳಿದ್ದವು. ಸೊಲೊಮೋನನು ಈ ರಥಗಳಿಗಾಗಿ ವಿಶೇಷವಾದ ನಗರಗಳನ್ನು ಕಟ್ಟಿಸಿದನು. ಆ ನಗರಗಳಲ್ಲಿ ರಥಗಳನ್ನು ಇರಿಸಿದನು. ರಾಜನಾದ ಸೊಲೊಮೋನನು ಕೆಲವು ರಥಗಳನ್ನು ಜೆರುಸಲೇಮಿನಲ್ಲಿ ತನ್ನ ಹತ್ತಿರ ಇಟ್ಟುಕೊಂಡನು.


ಅವನಿಗೆ ಆಳಲು ನೆರವಾದ ಅವನ ಮುಖ್ಯಾಧಿಕಾರಿಗಳ ಹೆಸರುಗಳು ಹೀಗಿವೆ: ಚಾದೋಕನ ಮಗನಾದ ಅಜರ್ಯನು ಯಾಜಕನಾಗಿದ್ದನು.


ಯೆಹೋವನು ಹೇಳಿದಂತೆಯೇ ಯೆಹೋಶುವನು ಮಾಡಿದನು. ಯೆಹೋಶುವನು ಅವರ ಕುದುರೆಯ ಕಾಲುಗಳನ್ನು ಕತ್ತರಿಸಿದನು; ಅವರ ರಥಗಳನ್ನು ಸುಟ್ಟುಹಾಕಿದನು.


ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು.


ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.


ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು. ಅವರ ರಹಸ್ಯಕೂಟಗಳನ್ನು ನನ್ನ ಆತ್ಮವು ಸ್ವೀಕರಿಸುವುದಿಲ್ಲ. ಅವರು ಕೋಪಗೊಂಡಾಗ ಗಂಡಸರನ್ನು ಕೊಂದುಹಾಕಿದರು. ಅವರು ಮೋಜಿಗೆಂದೇ ಪ್ರಾಣಿಗಳನ್ನು ಹಿಂಸಿಸಿದರು.


ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು.


ಹದದೆಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು