Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:6 - ಪರಿಶುದ್ದ ಬೈಬಲ್‌

6 ನಂತರ ಅರಾಮ್ಯರ ದಮಸ್ಕದಲ್ಲಿ ತನ್ನ ಕೋಟೆಯನ್ನು ಸ್ಥಾಪಿಸಿದನು. ಅರಾಮ್ಯರು ದಾವೀದನ ಸೇವಕರಾಗಿ ಅವನಿಗೆ ಕಪ್ಪಕಾಣಿಕೆಯನ್ನು ತಂದೊಪ್ಪಿಸುತ್ತಿದ್ದರು. ಹೀಗೆ ದಾವೀದನು ಹೋದ ಕಡೆಯಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ ಅವನು ದಮಸ್ಕದ ಸಿರಿಯಾ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಅವನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:6
8 ತಿಳಿವುಗಳ ಹೋಲಿಕೆ  

ಯುದ್ಧಕ್ಕಾಗಿ ಕುದುರೆಗಳನ್ನು ಸಿದ್ಧಪಡಿಸುತ್ತಾರೆ; ಆದರೆ ಜಯದ ನಿರ್ಧಾರ ಯೆಹೋವನಿಂದಲೇ.


ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.


ಅನಂತರ ದಾವೀದನು ಮೋವಾಬ್ಯರ ಸಂಗಡ ಯುದ್ಧಮಾಡಿ ಸೋಲಿಸಿದನು. ಅವರು ದಾವೀದನ ಸೇವಕರಾಗಿ ಕಪ್ಪ ಕೊಡಬೇಕಾಯಿತು.


ನೀನು ಹೋದಲ್ಲೆಲ್ಲಾ ನಿನ್ನೊಂದಿಗೆ ನಾನಿದ್ದೆನು; ನಿನ್ನ ಮುಂದೆ ಹೋಗಿ ನಿನ್ನ ವೈರಿಗಳನ್ನು ಸಾಯಿಸಿದೆನು. ಈಗ ನಾನು ನಿನ್ನನ್ನು ಲೋಕದಲ್ಲಿ ಎಲ್ಲರಿಗಿಂತಲೂ ಪ್ರಸಿದ್ಧಿ ಹೊಂದುವಂತೆ ಮಾಡುವೆನು.


ಹದದೆಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು.


ಹದದೆಜರನ ಸೇನಾಧಿಪತಿಗಳು ಉಪಯೋಗಿಸುತ್ತಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಜೆರುಸಲೇಮಿಗೆ ತಂದನು.


ಯೆಹೋವನು ದಾವೀದನ ಜೊತೆಗಿದ್ದನು. ಆದ್ದರಿಂದ ದಾವೀದನು ಎಲ್ಲದರಲ್ಲೂ ಯಶ್ವಸಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು