Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:2 - ಪರಿಶುದ್ದ ಬೈಬಲ್‌

2 ದಾವೀದನು, “ನಾಹಾಷನು ನನಗೆ ದಯೆ ತೋರಿಸಿದ್ದನು. ಅವನ ಮಗನಾದ ಹಾನೂನನಿಗೆ ನಾನೂ ದಯೆತೋರುವೆನು” ಎಂದು ಹೇಳಿ ಹಾನೂನನನ್ನು ಸಂತೈಸಲು ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನ್ ದೇಶಕ್ಕೆ ಹೋಗಿ ದುಃಖದಲ್ಲಿದ್ದ ಹಾನೂನನನ್ನು ಸಂತೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು” ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದಾವೀದನು, “ನಾಹಾಷನು ನನಗೆ ಸ್ನೇಹ ತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ದೂತರನ್ನು ಕಳುಹಿಸಿದನು. ಅವರು ಹಾನೂನನನ್ನು ಸಂತೈಸುವುದಕ್ಕಾಗಿ ಅಮ್ಮೋನಿಯರ ದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಾವೀದನು - ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆ ತೋರಿಸುವೆನು ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ದೂತರು ಹಾನೂನನಿಗೆ ಸಂತಾಪ ಸೂಚಿಸಲು, ಅಮ್ಮೋನಿಯರ ದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:2
14 ತಿಳಿವುಗಳ ಹೋಲಿಕೆ  

ದಾವೀದನು ಚಿಕ್ಲಗಿಗೆ ಆಗಮಿಸಿದನು. ನಂತರ ಅವನು ಅಮಾಲೇಕ್ಯರಿಂದ ವಶಪಡಿಸಿಕೊಂಡಿದ್ದ ಕೆಲವು ವಸ್ತುಗಳನ್ನು ಯೆಹೂದದ ಅವನ ಗೆಳೆಯರಿಗೂ ನಾಯಕರಿಗೂ ಕಳುಹಿಸಿದನು. ದಾವೀದನು, “ಯೆಹೋವನ ಶತ್ರುಗಳಿಂದ ನಾವು ವಶಪಡಿಸಿಕೊಂಡ ವಸ್ತುಗಳ ಕೊಡುಗೆಯು ನಿಮಗಾಗಿ ಇಲ್ಲಿದೆ” ಎಂದು ಹೇಳಿದನು.


ಆ ನಗರದಲ್ಲಿ ಒಬ್ಬ ಜ್ಞಾನಿ ಇದ್ದನು. ಆದರೆ ಅವನು ಬಡವನಾಗಿದ್ದನು, ಅವನು ತನ್ನ ಜ್ಞಾನದಿಂದ ಆ ನಗರವನ್ನು ಕಾಪಾಡಿದನು; ಆದರೆ ಜನರು ಅವನನ್ನು ಮರೆತೇಬಿಟ್ಟರು.


ಇದನ್ನು ಕೇಳುತ್ತಿದ್ದ ಅರಸನು, “ಮೊರ್ದೆಕೈ ಹೀಗೆ ಮಾಡಿದುದಕ್ಕೆ ಯಾವ ಗೌರವ ಮತ್ತು ಬಹುಮಾನಗಳು ಕೊಡಲ್ಪಟ್ಟವು?” ಎಂದು ವಿಚಾರಿಸಿದನು. “ಮೊರ್ದೆಕೈಗೆ ಏನೂ ಕೊಡಲಿಲ್ಲ” ಎಂದು ಸೇವಕರು ಉತ್ತರಿಸಿದರು.


ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನೆಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು.


ಸನ್ಬಲ್ಲಟನು, ಟೋಬೀಯನು, ಅರಬಿಯರು, ಅಮ್ಮೋನಿಯರು ಮತ್ತು ಅಷ್ಡೋದಿನವರು ತುಂಬಾ ಕೋಪಗೊಂಡಿದ್ದರು. ಯಾಕೆಂದರೆ ಜೆರುಸಲೇಮಿನ ಗೋಡೆಯ ಕೆಲಸ ಮುಂದುವರಿಯುತ್ತಿದೆಯೆಂದೂ ಮತ್ತು ಗೋಡೆಗಳ ಕಿಂಡಿಗಳನ್ನು ರಿಪೇರಿ ಮಾಡಲಾಗುತ್ತಿದೆಯೆಂದೂ ಅವರು ಕೇಳಿದ್ದರು.


ಅವನ ಜೊತೆಯಲ್ಲಿದ್ದ ಅಮ್ಮೋನಿಯನಾದ ಟೋಬೀಯನು, “ಈ ಯೆಹೂದ್ಯರು ಕಟ್ಟುತ್ತಿರುವುದೇನು? ಆ ಗೋಡೆಯ ಮೇಲೆ ಒಂದು ನರಿ ಹಾರಿದರೂ ಗೋಡೆಯು ಕುಸಿದುಬೀಳುವುದು” ಎಂದು ವ್ಯಂಗ್ಯವಾಗಿ ಹೇಳಿದನು.


ಎಲೀಷನು ಗೇಹಜಿಗೆ (ಸೇವಕನಿಗೆ), “ನೀನು ಆ ಸ್ತ್ರೀಯ ಬಳಿಗೆ ಹೋಗಿ, ‘ನೋಡು, ನೀನು ನಮ್ಮನ್ನು ಉಪಚರಿಸುವುದಕ್ಕಾಗಿ ನಿನ್ನಿಂದ ಸಾಧ್ಯವಾದಷ್ಟು ಮಾಡಿರುವೆ. ನಮ್ಮಿಂದ ನಿನಗೇನಾದರೂ ಉಪಕಾರವಾಗಬೇಕೇ? ನಿನ್ನ ಬಗ್ಗೆ ರಾಜನ ಬಳಿಯಲ್ಲಾದರೂ ಅಥವಾ ಸೈನ್ಯಾಧಿಕಾರಿಯ ಬಳಿಯಲ್ಲಾದರೂ ನಾವು ಮಾತನಾಡಬೇಕೇ?’ ಎಂದು ಕೇಳು” ಎಂಬುದಾಗಿ ಹೇಳಿದನು. ಆ ಸ್ತ್ರೀಯು, “ಇಲ್ಲಿ ನಾನು ನನ್ನ ಜನರೊಡನೆ ಸುಖವಾಗಿ ಜೀವಿಸುತ್ತಿದ್ದೇನೆ” ಎಂದು ಉತ್ತರಿಸಿದಳು.


ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.


ದಾವೀದನು, “ಸೌಲನ ಕುಟುಂಬದಲ್ಲಿ ಇನ್ನೂ ಯಾರಾದರೂ ಉಳಿದಿರುವರೇ? ಯೋನಾತಾನನಿಗೋಸ್ಕರ ನಾನು ಆ ವ್ಯಕ್ತಿಗೆ ದಯೆ ತೋರಿಸಬೇಕಾಗಿದೆ” ಎಂದು ಕೇಳಿದನು.


ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.


ನಾಹಾಷನು ಅಮ್ಮೋನಿಯರ ಅರಸನಾಗಿದ್ದನು. ಅವನು ಸತ್ತ ಬಳಿಕ ಅವನ ಮಗನು ಪಟ್ಟಕ್ಕೆ ಬಂದನು.


ಆದರೆ ಅಮ್ಮೋನಿಯರ ನಾಯಕರು ಹಾನೂನನಿಗೆ, “ಮೋಸ ಹೋಗಬೇಡ, ದಾವೀದನು ನಿನ್ನ ತಂದೆಯನ್ನು ಗೌರವಿಸಿ ನಿನ್ನನ್ನು ಸಂತೈಸಲು ಸೇವಕರನ್ನು ಕಳುಹಿಸಿದನೆಂದು ಭಾವಿಸಿಕೊಂಡಿರುವೆಯಾ? ಇಲ್ಲ, ಅವನು ನಿನ್ನ ರಾಜ್ಯದಲ್ಲಿ ಹೊಂಚುಹಾಕಲೂ ವಿಷಯಗಳನ್ನು ಸಂಗ್ರಹಿಸಲೂ ಕಳುಹಿಸಿದ್ದಾನೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು