Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:3 - ಪರಿಶುದ್ದ ಬೈಬಲ್‌

3 ಆದರೆ ಅಮ್ಮೋನಿಯರ ನಾಯಕರು ಹಾನೂನನಿಗೆ, “ಮೋಸ ಹೋಗಬೇಡ, ದಾವೀದನು ನಿನ್ನ ತಂದೆಯನ್ನು ಗೌರವಿಸಿ ನಿನ್ನನ್ನು ಸಂತೈಸಲು ಸೇವಕರನ್ನು ಕಳುಹಿಸಿದನೆಂದು ಭಾವಿಸಿಕೊಂಡಿರುವೆಯಾ? ಇಲ್ಲ, ಅವನು ನಿನ್ನ ರಾಜ್ಯದಲ್ಲಿ ಹೊಂಚುಹಾಕಲೂ ವಿಷಯಗಳನ್ನು ಸಂಗ್ರಹಿಸಲೂ ಕಳುಹಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಲ್ಲಿನ ನಾಯಕರು ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆ ಎಂದು ತಿಳಿಯುತ್ತೀರೋ? ಇಲ್ಲ, ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ಬಂದಿದ್ದಾರೆ,” ಎಂದು ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಲ್ಲಿನ ಪ್ರಭುಗಳು ಹಾನೂನನಿಗೆ - ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅಮ್ಮೋನಿಯರ ಪ್ರಧಾನರು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ಅವನ ದೂತರು ಈ ದೇಶವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಬರಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:3
12 ತಿಳಿವುಗಳ ಹೋಲಿಕೆ  

ಆಕೀಷನು, “ನೀನು ಒಳ್ಳೆಯವನೆಂದು ನಾನು ನಂಬುತ್ತೇನೆ. ನೀನು ದೇವದೂತನಂತಿರುವೆ. ಆದರೆ ಫಿಲಿಷ್ಟಿಯ ಸೇನಾಧಿಪತಿಗಳು, ‘ದಾವೀದನು ನಮ್ಮ ಜೊತೆ ಯುದ್ಧಕ್ಕೆ ಬರುವಂತಿಲ್ಲ’ ಎಂದು ಈಗಲೂ ಹೇಳುತ್ತಿದ್ದಾರೆ.


ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಬಹಳ ಕೋಪಗೊಂಡು, “ದಾವೀದನನ್ನು ಹಿಂದಕ್ಕೆ ಕಳುಹಿಸು! ನೀನು ಕೊಟ್ಟಿರುವ ನಗರಕ್ಕೆ ದಾವೀದನು ಹಿಂದಿರುಗಿ ಹೋಗಲೇಬೇಕು. ಅವನು ನಮ್ಮೊಡನೆ ಯುದ್ಧಕ್ಕೆ ಬರುವಂತಿಲ್ಲ. ಅವನು ನಮ್ಮ ಜೊತೆಯಲ್ಲಿದ್ದರೆ, ಆಗ ನಮ್ಮ ಪಾಳೆಯದಲ್ಲಿ ಒಬ್ಬ ಶತ್ರುವಿದ್ದಂತಾಗುತ್ತದೆ. ಅವನು ನಮ್ಮ ಜನರನ್ನು ಕೊಲ್ಲುವುದರ ಮೂಲಕ ತನ್ನ ರಾಜನ ಮೆಚ್ಚಿಕೆಯನ್ನು ಗಳಿಸುತ್ತಾನೆ.


ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ “ಭೂಮಿಯನ್ನು ಹುಡುಕಲು” ಅವರನ್ನು ಕಳುಹಿಸಲಾಗಿತ್ತು. ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು.


ಆದರೆ ಅಮ್ಮೋನಿಯರ ನಾಯಕರು ತಮ್ಮ ಪ್ರಭುವಾದ ಹಾನೂನನಿಗೆ, “ನಿನ್ನನ್ನು ಸಂತೈಸಲು ಕೆಲವು ಜನರನ್ನು ಕಳುಹಿಸುವುದರ ಮೂಲಕ ದಾವೀದನು ನಿನ್ನ ತಂದೆಯನ್ನು ಗೌರವಿಸಲು ಪ್ರಯತ್ನಿಸುತ್ತಿರುವನೆಂದು ನೀನು ಭಾವಿಸಿರುತ್ತಿಯಲ್ಲವೇ? ಇಲ್ಲ! ನಿನ್ನ ನಗರದ ಸಂಗತಿಗಳನ್ನು ರಹಸ್ಯವಾಗಿ ಕಂಡುಕೊಳ್ಳಲು ಮತ್ತು ತಿಳಿದುಕೊಳ್ಳಲು ದಾವೀದನು ಈ ಜನರನ್ನು ಕಳುಹಿಸಿದ್ದಾನೆ. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡಲು ಯೋಜನೆ ಮಾಡುತ್ತಿದ್ದಾರೆ” ಎಂದು ಹೇಳಿದರು.


ದಾವೀದನು, “ನಾಹಾಷನು ನನಗೆ ದಯೆ ತೋರಿಸಿದ್ದನು. ಅವನ ಮಗನಾದ ಹಾನೂನನಿಗೆ ನಾನೂ ದಯೆತೋರುವೆನು” ಎಂದು ಹೇಳಿ ಹಾನೂನನನ್ನು ಸಂತೈಸಲು ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನ್ ದೇಶಕ್ಕೆ ಹೋಗಿ ದುಃಖದಲ್ಲಿದ್ದ ಹಾನೂನನನ್ನು ಸಂತೈಸಿದರು.


ಆಗ ಹಾನೂನನು ದಾವೀದನ ಸೇವಕರನ್ನು ಬಂಧಿಸಿ ಅವರ ಗಡ್ಡಗಳನ್ನು ಬೋಳಿಸಿ ಅವರ ವಸ್ತ್ರಗಳನ್ನು ಸೊಂಟದಿಂದ ಕೆಳಭಾಗದವರೆಗೆ ಕತ್ತರಿಸಿಬಿಟ್ಟು ಅವರನ್ನು ಹಿಂದಕ್ಕೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು