1 ಪೂರ್ವಕಾಲ ವೃತ್ತಾಂತ 19:5 - ಪರಿಶುದ್ದ ಬೈಬಲ್5 ದಾವೀದನ ಸೇವಕರು ತಮ್ಮ ಮನೆಗೆ ಹಿಂದಿರುಗಲು ನಾಚಿಕೆಪಟ್ಟರು. ಇದನ್ನು ಅರಿತ ಕೆಲವರು ದಾವೀದನ ಬಳಿಗೆ ಹೋಗಿ ನಡೆದದ್ದನ್ನು ತಿಳಿಸಿದರು. ಆಗ ದಾವೀದನು, “ನೀವು ನಿಮ್ಮ ಗಡ್ಡ ಬೆಳೆಯುವ ತನಕ ಜೆರಿಕೊ ಪಟ್ಟಣದಲ್ಲಿಯೇ ಇರಿ. ಅನಂತರ ನೀವು ಮನೆಗೆ ಬರಬಹುದು” ಎಂದು ತನ್ನ ಸೇವಕರಿಗೆ ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅವಮಾನಹೊಂದಿ ಅವರಿಗೆ ಆಳುಗಳ ಮುಖಾಂತರವಾಗಿ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನಹೊಂದಿದ ಅವರಿಗೆ ಆಗ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅಪಮಾನ ಹೊಂದಿದ ಅವರಿಗೆ ಆಳುಗಳ ಮುಖಾಂತರವಾಗಿ - ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಕೆಲವರು ಹೋಗಿ, ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ,” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿ |
ಅಹಾಬನ ಕಾಲದಲ್ಲಿ ಬೇತೇಲಿನ ಹೀಯೇಲನು ಜೆರಿಕೊ ಪಟ್ಟಣವನ್ನು ಮತ್ತೆ ನಿರ್ಮಿಸಿದನು. ಹೀಯೇಲನು ನಗರದಲ್ಲಿ ಈ ಕೆಲಸವನ್ನು ಮಾಡಲು ಆರಂಭಿಸಿದ ಕಾಲದಲ್ಲಿಯೇ ಅವನ ಹಿರಿಯ ಮಗನಾದ ಅಬೀರಾಮನು ಸತ್ತುಹೋದನು. ಹೀಯೇಲನು ನಗರದ ಬಾಗಿಲುಗಳನ್ನು ಕಟ್ಟಿಸಿದಾಗ, ಅವನ ಕಿರಿಯ ಮಗನಾದ ಸೆಗೂಬನು ಸತ್ತುಹೋದನು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ನೂನನ ಮಗನಾದ ಯೆಹೋಶುವನ ಮೂಲಕ ಯೆಹೋವನು ಇದನ್ನು ತಿಳಿಸಿದ್ದನು.