Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:51 - ಪರಿಶುದ್ದ ಬೈಬಲ್‌

51 ಬೆತ್ಲೆಹೇಮನ್ನು ಕಟ್ಟಿದವನಾದ ಸಲ್ಮ ಮತ್ತು ಬೇತ್ಗಾದೇರ್ ಕಟ್ಟಿದವನಾದ ಹಾರೇಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಬೇತ್ಲೆಹೇಮ್ಯರ ಮೂಲಪುರುಷನಾದ ಸಲ್ಮ ಮತ್ತು ಬೇತ್ಗಾದೇರಿನ ಮೂಲಪುರುಷನಾದ ಹಾರೇಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಅವನ ಇನ್ನೊಬ್ಬ ಮಗ ಸಲ್ಮ ಬೆತ್ಲೆಹೇಮನ್ನೂ ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಬೇತ್ಗಾದೇರಿನವರ ಮೂಲಪುರುಷನಾದ ಹಾರೇಫ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಅವನ ಇನ್ನೊಬ್ಬ ಮಗ ಸಲ್ಮ ಬೇತ್ಲೆಹೇಮನ್ನೂ, ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:51
11 ತಿಳಿವುಗಳ ಹೋಲಿಕೆ  

ಪೆನೂವೇಲನು ಗೆದೋರನ ತಂದೆ: ಏಜೆರನು ಹೂಷಾಹ್ಯನ ತಂದೆ. ಇವರು ಹೂರನ ಗಂಡುಮಕ್ಕಳು. ಹೂರನು ಎಫ್ರಾತಾಹಳ ಮೊದಲನೆಯ ಮಗನು. ಇವನೇ ಬೆತ್ಲೇಹೇಮ್ಯರ ಮೂಲಪಿತೃ.


ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೆತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು.


‘ಯೆಹೂದ ಪ್ರಾಂತ್ಯದಲ್ಲಿರುವ ಬೆತ್ಲೆಹೇಮೇ, ಯೆಹೂದವನ್ನು ಆಳುವವರಲ್ಲಿ ನೀನು ಪ್ರಾಮುಖ್ಯವಾಗಿರುವೆ. ಹೌದು, ಅಧಿಪತಿಯೊಬ್ಬನು ನಿನ್ನೊಳಗಿಂದ ಬರುವನು. ನನ್ನ ಜನರಾದ ಇಸ್ರೇಲರನ್ನು ಆತನೇ ಮುನ್ನಡೆಸುವನು’” ಎಂದು ಉತ್ತರಕೊಟ್ಟರು.’”


ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.


ನಗರದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು ಸಾಕ್ಷಿಗಳಾಗಿದ್ದರು. ಅವರು, “ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲಿಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು!


ತರುವಾಯ ಬೋವಜನು ಬೆತ್ಲೆಹೇಮಿನಿಂದ ಹೊಲಕ್ಕೆ ಬಂದನು. ಅವನು ಕೆಲಸಗಾರರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಎಂದು ಹರಸಿದನು. ಆ ಕೆಲಸಗಾರರು, “ಯೆಹೋವನು ನಿನಗೆ ಕೃಪೆ ತೋರಲಿ” ಎಂದು ಉತ್ತರಿಸಿದರು.


ಅವರಿಬ್ಬರೂ ಪ್ರಯಾಣ ಮಾಡಿ ಬೆತ್ಲೆಹೇಮ್ ಊರಿಗೆ ತಲುಪಿದರು. ಅವರಿಬ್ಬರನ್ನು ಕಂಡಾಗ ಬೆತ್ಲೆಹೇಮ್ ಪಟ್ಟಣದ ಜನರಿಗೆ ಆಶ್ಚರ್ಯವಾಯಿತು. “ಇವಳು ನೊವೊಮಿಯೇ?” ಎಂದು ಅವರು ಕೇಳಿದರು.


ರಾಹೇಲಳನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.


ಇದು ಕಾಲೇಬನ ಸಂತತಿಯವರ ಪಟ್ಟಿ; ಕಾಲೇಬನ ಚೊಚ್ಚಲಮಗನು ಹೂರ. ಇವನು ಎಫ್ರಾತಳಿಗೆ ಹುಟ್ಟಿದವನು. ಹೂರನ ಗಂಡುಮಕ್ಕಳು ಯಾರೆಂದರೆ, ಕಿರ್ಯತ್ಯಾರೀಮ್ ಕಟ್ಟಿದವನಾದ ಶೋಬಾಲ್ ಮತ್ತು


ಶೋಬಾಲನು ಕಿರ್ಯತ್ಯಾರೀಮನ್ನು ಕಟ್ಟಿದನು. ಇದು ಶೋಬಾಲನ ಸಂತತಿಯವರ ಪಟ್ಟಿ: ಹಾರೋಯೆ ಮತ್ತು ಮಾನಹತಿ ಊರಿನ ಅರ್ಧಜನರು;


ನ್ಯಾಯಾಧೀಶರು ಆಳುತ್ತಿದ್ದಾಗ ದೇಶದಲ್ಲಿ ಬರಗಾಲ ಬಂತು. ಆಗ ಎಲೀಮೆಲೆಕನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ಇಬ್ಬರು ಗಂಡುಮಕ್ಕಳೊಡನೆ ಯೆಹೂದಪ್ರಾಂತದ ಬೆತ್ಲೆಹೇಮ್ ನಗರವನ್ನು ಬಿಟ್ಟು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು