Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:6 - ಪರಿಶುದ್ದ ಬೈಬಲ್‌

6 ಜೆರಹನಿಗೆ ಐದು ಗಂಡುಮಕ್ಕಳು. ಅವರು ಯಾರೆಂದರೆ: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಜೆರಹನ ಐದು ಮಕ್ಕಳು ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನ ಸಹೋದರ ಜೆರಹನಿಗೆ ಐದು ಜನ ಮಕ್ಕಳು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್, ಮತ್ತು ದಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಜೆರಹನ ಮಕ್ಕಳು - ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್, ದಾರ; ಒಟ್ಟು ಐದು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜೆರಹನ ಪುತ್ರರು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ, ಒಟ್ಟು ಐದು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:6
7 ತಿಳಿವುಗಳ ಹೋಲಿಕೆ  

ಪ್ರಪಂಚದಲ್ಲಿನ ಯಾವುದೇ ವ್ಯಕ್ತಿಯ ಜ್ಞಾನಕ್ಕಿಂತಲೂ ಹೆಚ್ಚಿನ ಜ್ಞಾನವು ಅವನಲ್ಲಿತ್ತು. ಅವನು ಜೆರಹನ ಮಗನಾದ ಏತಾನನಿಗಿಂತಲೂ ಜ್ಞಾನಿಯಾಗಿದ್ದನು. ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದರಿಗಿಂತ ಅವನು ಜ್ಞಾನಿಯಾಗಿದ್ದನು. ರಾಜನಾದ ಸೊಲೊಮೋನನು ಇಸ್ರೇಲ್ ಮತ್ತು ಯೆಹೂದಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೆಲ್ಲಾ ಪ್ರಸಿದ್ಧನಾಗಿದ್ದನು.


ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.


ಪೆರೆಚನ ಗಂಡುಮಕ್ಕಳು ಯಾರೆಂದರೆ: ಹೆಚ್ರೋನ್ ಮತ್ತು ಹಾಮೂಲ್.


(ಕರ್ಮೀಯು ಜಿಮ್ರಿಯ ಮಗನು.) ಜಿಮ್ರಿಯು ಆಕಾನನ ಮಗನು. ಈ ಆಕಾನನು ಯುದ್ಧದಲ್ಲಿ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರೇಲರಿಗೆ ದೊಡ್ಡ ಆಪತ್ತನ್ನು ತಂದವನು.


ಯೆಹೋವ ದೇವರೇ, ನೀನೇ ನನ್ನ ರಕ್ಷಕನು. ಹಗಲಿರುಳು ನಿನಗೆ ಪ್ರಾರ್ಥಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು