Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 20:4 - ಪರಿಶುದ್ದ ಬೈಬಲ್‌

4 ಇದಾದ ಬಳಿಕ ಇಸ್ರೇಲರು ಗೆಜೆರಿನಲ್ಲಿ ಫಿಲಿಷ್ಟಿಯರ ಜೊತೆಯಲ್ಲಿ ಯುದ್ಧಮಾಡಿದರು. ಹುಷಯದವನಾದ ಸಿಬ್ಬೆಕೈ ಎಂಬವನು, ದೈತ್ಯನ ಮಗನಾದ ಸಿಪ್ಪೈ ಎಂಬವನನ್ನು ಕೊಂದನು. ಇದರಿಂದಾಗಿ ಫಿಲಿಷ್ಟಿಯರು ಇಸ್ರೇಲರಿಗೆ ಸೇವೆಮಾಡುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಳಿಕ ಫಿಲಿಷ್ಟಿಯರ ವಿರುದ್ಧ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದನು. ಫಿಲಿಷ್ಟಿಯರು ಇದರಿಂದ ಕುಗ್ಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದದ್ದರಿಂದ ಫಿಲಿಷ್ಟಿಯರು ಸೋತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 20:4
9 ತಿಳಿವುಗಳ ಹೋಲಿಕೆ  

ಹುಷತ್ಯನಾದ ಸಿಬ್ಕ್ಯೆ, ಅಹೋಹಿನವನಾದ ಈಲೈ;


ಫಿಲಿಷ್ಟಿಯರು ದಾವೀದನೊಡನೆ ಮತ್ತೆ ಯುದ್ಧವನ್ನು ಮಾಡಿದರು. ದಾವೀದನು ತನ್ನ ಜನರೊಂದಿಗೆ ಫಿಲಿಷ್ಟಿಯರ ವಿರುದ್ಧ ಹೋರಾಡಲು ಹೋದನು. ಆದರೆ ದಾವೀದನು ಆಯಾಸಗೊಂಡು ಬಲಹೀನನಾದನು.


ಅಲ್ಲಿಂದ ಪಶ್ಚಿಮದಿಕ್ಕಿನಲ್ಲಿರುವ ಯಪ್ಲೇಟ್ಯರ ಪ್ರಾಂತ್ಯದ ಸೀಮೆಗೆ ಮುಟ್ಟಿ ಅಲ್ಲಿಂದ ಕೆಳಗಿನ ಬೇತ್‌ಹೋರೋನ್ ಕಡೆಗೆ ಮುಂದುವರೆಯುತ್ತದೆ. ಅಲ್ಲಿಂದ ಗೆಜೆರಿಗೆ ಹೋಗಿ ಮೆಡಿಟರೆನಿಯನ್ ಸಮುದ್ರದತ್ತ ಮುಂದುವರೆಯುತ್ತದೆ.


ಎಗ್ಲೋನಿನ ಅರಸ ಗೆಜೆರಿನ ಅರಸ


ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.


ಇಷ್ಬೀಬೆನೋಬನು ಒಬ್ಬ ರಾಕ್ಷಸನ ಮಗ. ಅವನ ಬರ್ಜಿಯು ಏಳುವರೆ ಪೌಂಡುಗಳಷ್ಟು ತೂಕವಿತ್ತು. ಅವನು ಹೊಸ ಖಡ್ಗವನ್ನು ಹೊಂದಿದ್ದನು. ಅವನು ದಾವೀದನನ್ನು ಕೊಲ್ಲುವುದಕ್ಕಿದ್ದನು.


ಯೆಹೋವನು ಹೇಳಿದಂತೆಯೇ ದಾವೀದನು ಮಾಡಿದನು. ದಾವೀದನೂ ಅವನ ಸೈನಿಕರೂ ಫಿಲಿಷ್ಟಿಯರನ್ನು ಸೋಲಿಸಿ ಗಿಬ್ಯೋನಿನಿಂದ ಹಿಡಿದು ಗೆಜೆರ್ ಪಟ್ಟಣದವರೆಗೂ ಅವರನ್ನು ಕೊಲ್ಲುತ್ತಾ ಹೋದರು.


ಎಂಟನೆಯ ಸೇನಾಧಿಪತಿಯ ಹೆಸರು ಸಿಬ್ಬಕೈ. ಇವನು ಹುಷ ಊರಿನ ಜೆರಹನ ಸಂತತಿಯವನು. ವರ್ಷದ ಎಂಟನೆಯ ತಿಂಗಳಿನ ಸೇನಾಧಿಪತಿ. ಇವನ ಕೈ ಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು