Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 20:5 - ಪರಿಶುದ್ದ ಬೈಬಲ್‌

5 ಇನ್ನೊಂದು ಸಾರಿ, ಇಸ್ರೇಲರು ಫಿಲಿಷ್ಟಿಯರೊಂದಿಗೆ ತಿರುಗಿ ಯುದ್ಧಮಾಡುವಾಗ ಯಾಯೀರನ ಮಗನಾದ ಎಲ್ಹಾನಾನನು ಗೊಲ್ಯಾತನ ತಮ್ಮನಾದ ಲಹ್ಮೀಯನ್ನು ಕೊಂದನು. ಗೊಲ್ಯಾತನು ಗತ್ ಪಟ್ಟಣದವನಾಗಿದ್ದನು. ಲಹ್ಮೀಯ ಈಟಿಯು ಬಹು ಭಾರವಾಗಿತ್ತು. ಕೈಮಗ್ಗದ ದೊಡ್ಡ ಕುಂಟೆಯಷ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮ ಲಹ್ಮೀಯನನ್ನು ಕೊಂದನು. ಈ ಲಹ್ಮೀಯನ ಬರ್ಜಿಯ ಹಿಡಿಕೆ ನೇಕಾರರ ಕುಂಟೆಯಷ್ಟು ದೊಡ್ಡದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನ್ನು ಕೊಂದನು. ಲಹ್ಮೀಯ ಬರ್ಜಿಯ ಹಿಡಿಕೆಯು ನೇಯಿಗಾರರ ಕುಂಟೆಯಷ್ಟು ಗಾತ್ರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅನಂತರ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾದಾಗ, ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 20:5
7 ತಿಳಿವುಗಳ ಹೋಲಿಕೆ  

ಆಗ ಗೋಬ್ ಎಂಬ ಸ್ಥಳದಲ್ಲಿ ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಆರಂಭವಾಯಿತು. ಯಾರೇಯೋರೆಗೀವ್ ಎಂಬವನು ಬೆನ್ಯಾಮೀನ್ ಕುಲದವನೂ ಬೆತ್ಲೆಹೇಮಿನವನೂ ಆಗಿದ್ದನು. ಇವನ ಮಗನಾದ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಭರ್ಜಿಯು ನೇಕಾರನ ಕುಂಟೆಯಷ್ಟು ಗಾತ್ರವಿತ್ತು.


ಅಹೀಮೆಲೆಕನು ದಾವೀದನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಅಹೀಮೆಲೆಕನು ದಾವೀದನಿಗೆ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನೂ ಕೊಟ್ಟನು” ಎಂದು ಹೇಳಿದನು.


ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಆ ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು. ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು.


ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯ ಗಾತ್ರದಷ್ಟಿತ್ತು. ಆ ಬರ್ಜಿಯ ಅಲಗಿನ ಭಾರವು ಹದಿನೈದು ಪೌಂಡ್‌ಗಳಷ್ಟಿತ್ತು. ಗೊಲ್ಯಾತನ ಗುರಾಣಿಯನ್ನು ಹೊತ್ತಿದ್ದ ಅವನ ಸಹಾಯಕನು ಅವನ ಮುಂದೆ ಹೋಗುತ್ತಿದ್ದನು.


ಫಿಲಿಷ್ಟಿಯರಲ್ಲಿ ಗೊಲ್ಯಾತನೆಂಬ ಹೆಸರಿನ ವೀರ ಯೋಧನಿದ್ದನು. ಆತನು ಗತ್ ಊರಿನವನು. ಗೊಲ್ಯಾತನು ಒಂಭತ್ತು ಅಡಿ ಎತ್ತರವಾಗಿದ್ದನು. ಅವನು ಫಿಲಿಷ್ಟಿಯರ ಪಾಳೆಯದಿಂದ ಹೊರಬಂದನು.


ಈಜಿಪ್ಟಿನಲ್ಲಿ ಅತ್ಯಂತ ಎತ್ತರವಾಗಿದ್ದ ಮಹಾಸೈನಿಕನೊಬ್ಬನನ್ನು ಬೆನಾಯನು ಕೊಂದುಹಾಕಿದನು. ಅವನು ಏಳೂವರೆ ಅಡಿ ಎತ್ತರವಾಗಿದ್ದನು. ಅವನ ಕೈಯಲ್ಲಿದ್ದ ಈಟಿಯು ದೊಡ್ಡ ಕಂಬದಂತೆ ಇತ್ತು. ಬೆನಾಯನ ಕೈಯಲ್ಲಿ ಒಂದು ದೊಣ್ಣೆಮಾತ್ರ ಇತ್ತು. ಬೆನಾಯನು ಅವನ ಹತ್ತಿರ ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದಲೇ ಅವನನ್ನು ಸಾಯಿಸಿದನು.


ಇದಾದನಂತರ ಇನ್ನೊಂದು ಯುದ್ಧವನ್ನು ಇಸ್ರೇಲರು ಫಿಲಿಷ್ಟಿಯರೊಂದಿಗೆ ಗತ್ ಊರಿನಲ್ಲಿ ಮಾಡಿದರು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು