1 ಪೂರ್ವಕಾಲ ವೃತ್ತಾಂತ 21:13 - ಪರಿಶುದ್ದ ಬೈಬಲ್13 ಆಗ ಗಾದನಿಗೆ ದಾವೀದನು, “ನಾನು ಈಗ ಕಷ್ಟದಲ್ಲಿ ಬಿದ್ದಿದ್ದೇನೆ! ನನ್ನ ಶಿಕ್ಷೆಯನ್ನು ಮನುಷ್ಯನು ನಿರ್ಧರಿಸಬಾರದು. ಯೆಹೋವನು ಕರುಣೆಯುಳ್ಳವನು. ಆದ್ದರಿಂದ ಆತನೇ ನಿರ್ಧರಿಸಲಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ದಾವೀದನು, “ನಾನು ಬಹಳ ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೇ ಬೀಳುತ್ತೇನೆ; ಅವರು ಕೃಪಾಪೂರ್ಣರು, ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಹಸ್ತದಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಯೆಹೋವ ದೇವರ ಕೈಯಲ್ಲಿಯೇ ಬೀಳುತ್ತೇನೆ. ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು. ಅಧ್ಯಾಯವನ್ನು ನೋಡಿ |
ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.
ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.