Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:14 - ಪರಿಶುದ್ದ ಬೈಬಲ್‌

14 ಆಗ ಯೆಹೋವನು ಇಸ್ರೇಲರ ಮೇಲೆ ಬಹು ಘೋರವಾದ ವ್ಯಾಧಿಯನ್ನು ಕಳುಹಿಸಿದ್ದರಿಂದ ಎಪ್ಪತ್ತು ಸಾವಿರ ಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು; ಅವರಲ್ಲಿ ಇಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು; ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ಯೆಹೋವ ದೇವರು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:14
7 ತಿಳಿವುಗಳ ಹೋಲಿಕೆ  

ಚೆರೂಯಳ ಮಗನಾದ ಯೋವಾಬನು ಲೆಕ್ಕಿಸುವ ಕಾರ್ಯ ಪ್ರಾರಂಭಿಸಿದನು. ಆದರೆ ಅವನು ಪೂರ್ಣಗೊಳಿಸಲಿಲ್ಲ. ದೇವರು ಇಸ್ರೇಲರ ಮೇಲೆ ಕೋಪಗೊಂಡನು. ಇದರಿಂದಾಗಿ ಇಸ್ರೇಲರ ಜನಸಂಖ್ಯೆಯನ್ನು ದಾವೀದನ ಚರಿತ್ರಾ ಪುಸ್ತಕದಲ್ಲಿ ದಾಖಲೆ ಮಾಡಲಿಲ್ಲ.


ಆ ರಾತ್ರಿ ಯೆಹೋವನ ದೂತನು ಹೊರಕ್ಕೆ ಹೋಗಿ, ಅಶ್ಶೂರದ ಶಿಬಿರದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಜನರನ್ನು ಕೊಂದುಹಾಕಿದನು. ಜನರು ಬೆಳಗಿನ ಜಾವದಲ್ಲಿ ಮೇಲಕ್ಕೆದ್ದಾಗ ಸತ್ತ ದೇಹಗಳನ್ನು ನೋಡಿದರು.


ಆದ್ದರಿಂದ ಯೆಹೋವನು ಇಸ್ರೇಲಿಗೆ ರೋಗರುಜಿನಗಳನ್ನು ಬರಮಾಡಿದನು. ಇವು ಹೊತ್ತಾರೆಯಿಂದ ಆರಂಭವಾಗಿ ನಿಯಮಿತಕಾಲದವರೆಗೆ ಮುಂದುವರಿದವು. ದಾನ್‌ನಿಂದ ಬೇರ್ಷೆಬದವರೆಗೆ ಎಪ್ಪತ್ತುಸಾವಿರ ಜನರು ಸತ್ತರು.


ಆದರೆ ಯಾಜಕರಿಲ್ಲದ ಕಾರಣ ಬೇತ್‌ಷೆಮೆಷಿನ ಜನರು ಪವಿತ್ರ ಪೆಟ್ಟಿಗೆಯನ್ನು ಹಣಿಕಿ ನೋಡಿದ್ದರಿಂದ ಬೇತ್‌ಷೆಮೆಷಿನ ಎಪ್ಪತ್ತು ಜನರನ್ನು ಯೆಹೋವನು ಕೊಂದನು. ಯೆಹೋವನು ಕ್ರೂರವಾಗಿ ಶಿಕ್ಷಿಸಿದ್ದರಿಂದ ಬೇತ್‌ಷೆಮೆಷಿನ ಜನರು ಗೋಳಾಡಿ,


ಆ ವ್ಯಾಧಿಯಿಂದ ಒಟ್ಟು 24,000 ಜನರು ಸತ್ತುಹೋದರು.


ಆ ರಾತ್ರಿಯಲ್ಲಿ ಫರೋಹನೂ ಅವನ ಅಧಿಕಾರಿಗಳೂ ಈಜಿಪ್ಟಿನ ಜನರೆಲ್ಲರೂ ಎದ್ದರು. ಈಜಿಪ್ಟಿನಲ್ಲಿ ಮಹಾ ಗೋಳಾಟ ಉಂಟಾಯಿತು. ಯಾಕೆಂದರೆ ಸಾವಿಲ್ಲದ ಮನೆಯೇ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು