1 ಪೂರ್ವಕಾಲ ವೃತ್ತಾಂತ 21:15 - ಪರಿಶುದ್ದ ಬೈಬಲ್15 ದೇವರು ಜೆರುಸಲೇಮಿನ ಜನರನ್ನು ನಾಶನ ಮಾಡುವುದಕ್ಕೆ ದೂತನನ್ನು ಕಳುಹಿಸಿದನು. ಯೆಹೋವನು ಅದನ್ನು ನೋಡಿ ದುಃಖಗೊಂಡು ಜನರನ್ನು ನಾಶಮಾಡಲು ಬಂದಿದ್ದ ದೂತನಿಗೆ, “ಸಾಕು, ಇನ್ನು ನಿಲ್ಲಿಸು” ಅಂದನು. ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತುಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೇವರು ಜೆರುಸಲೇಮನ್ನು ಸಹ ಸಂಹರಿಸಬೇಕೆಂದು ದೂತನನ್ನು ಕಳುಹಿಸಿದರು. ಆದರೆ ಆ ದೂತನು ಸಂಹರಿಸುವುದಕ್ಕಿದ್ದಾಗ ಸರ್ವೇಶ್ವರ ಅದನ್ನು ಕಂಡು, ಆ ಕೇಡಿನ ವಿಷಯದಲ್ಲಿ ದುಃಖಪಟ್ಟರು. ಸಂಹಾರಕ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದು ಆಜ್ಞಾಪಿಸಿದರು. ಆಗ ಸರ್ವೇಶ್ವರನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದೇವರು ಯೆರೂಸಲೇಮನ್ನೂ ಸಂಹರಿಸುವದಕ್ಕೆ ದೂತನನ್ನು ಕಳುಹಿಸಿದನು; ಆದರೆ ಆ ದೂತನು ಸಂಹರಿಸುವದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಟ್ಟು ಸಂಹಾರಕದೂತನಿಗೆ - ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಯೆರೂಸಲೇಮನ್ನು ನಾಶಮಾಡುವುದಕ್ಕೆ ದೇವರು ದೂತನನ್ನು ಕಳುಹಿಸಿದರು. ಅವನು ನಾಶಮಾಡುವುದನ್ನು ಯೆಹೋವ ದೇವರು ನೋಡಿ, ಆ ದಂಡನೆಗೋಸ್ಕರ ದುಃಖಪಟ್ಟು, ಜನರನ್ನು ನಾಶಮಾಡುವ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು. ಅಧ್ಯಾಯವನ್ನು ನೋಡಿ |
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’
ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.