Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:16 - ಪರಿಶುದ್ದ ಬೈಬಲ್‌

16 ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರುಸಲೇಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕವಸ್ತ್ರಗಳನ್ನು ಧರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದಾವೀದನು ಕಣ್ಣೆತ್ತಿ ನೋಡಿ ಸರ್ವೇಶ್ವರನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಜೆರುಸಲೇಮಿಗೆ ವಿರೋಧವಾಗಿ ಹಿರಿದ ಕತ್ತಿ ಇರುವುದನ್ನೂ ಕಂಡನು. ಆಗ ಅವನೂ ಹಿರಿಯರೂ ಗೋಣಿತಟ್ಟನ್ನು ಉಟ್ಟುಕೊಂಡು ಬೋರಲಾಗಿ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವದನ್ನೂ ಚಾಚಿದ ಕೈಯಲ್ಲಿ ಯೆರೂಸಲೇವಿುಗೆ ವಿರೋಧವಾಗಿ ಹಿರಿದ ಕತ್ತಿಯಿರುವದನ್ನೂ ಕಂಡಾಗ ಅವನೂ ಹಿರಿಯರೂ ಗೋಣೀತಟ್ಟನ್ನು ಹೊದ್ದುಕೊಂಡವರಾಗಿ ಬೋರ್ಲಬಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:16
15 ತಿಳಿವುಗಳ ಹೋಲಿಕೆ  

ಆಗ ಮೋಶೆ ಆರೋನರು ಇಸ್ರೇಲರ ಸರ್ವ ಸಮೂಹದವರ ಮುಂದೆ ಬೋರಲಬಿದ್ದರು.


ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.


ರಾಜನಾದ ಹಿಜ್ಕೀಯನು ಅವುಗಳನ್ನೆಲ್ಲ ಕೇಳಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯದೊಳಕ್ಕೆ ಹೋದನು.


ನಂತರ ಎಲೀಷನು ಪ್ರಾರ್ಥಿಸುತ್ತಾ, “ಯೆಹೋವನೇ, ನನ್ನ ಸೇವಕನ ಕಣ್ಣುಗಳನ್ನು ತೆರೆದು ಅವನು ನೋಡುವಂತೆ ಮಾಡೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಯೆಹೋವನು ಸೇವಕನ ಕಣ್ಣುಗಳನ್ನು ತೆರೆದನು. ಆ ಸೇವಕನು ಪರ್ವತವನ್ನು ತುಂಬಿರುವ ಬೆಂಕಿಯಂತಿರುವ ಕುದುರೆಗಳನ್ನು ಮತ್ತು ರಥಗಳನ್ನು ನೋಡಿದನು. ಅವರೆಲ್ಲ ಎಲೀಷನ ಸುತ್ತಲೂ ಇದ್ದರು!


ಆಗ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲಿ ನಿಂತಿರುವ ಯೆಹೋವನ ದೂತನನ್ನು ನೋಡುವಂತೆ ಮಾಡಿದನು. ಅವನನ್ನು ಕಂಡಾಗ ಬಿಳಾಮನು ಮೊಣಕಾಲೂರಿ ತನ್ನ ಮುಖವನ್ನು ನೆಲದವರೆಗೂ ಬಾಗಿಸಿದನು.


ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.


ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು.


ಮಾನೋಹ ಮತ್ತು ಅವನ ಹೆಂಡತಿಯ ಕಣ್ಣೆದುರಿನಲ್ಲಿಯೇ ಯಜ್ಞವೇದಿಕೆಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯಲ್ಲಿ ಆ ಯೆಹೋವನ ದೂತನು ಆಕಾಶಕ್ಕೆ ಏರಿ ಹೋದನು. ಮಾನೋಹ ಮತ್ತು ಅವನ ಹೆಂಡತಿ ಅದನ್ನು ಕಂಡು ನೆಲದ ಮೇಲೆ ಅಡ್ಡಬಿದ್ದರು.


ಅವರು ಜನರನ್ನು ಕೊಲ್ಲಲು ಹೊರಟಾಗ ನಾನೊಬ್ಬನೇ ಅಲ್ಲಿದ್ದೆನು. ನಾನು ಬಾಗಿ ನಮಸ್ಕರಿಸಿ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನೀನು ಜೆರುಸಲೇಮಿನ ಮೇಲೆ ನಿನ್ನ ಕೋಪವನ್ನು ಪ್ರದರ್ಶಿಸುವಾಗ ಉಳಿದ ಇಸ್ರೇಲರನ್ನು ನೀನು ನಿರ್ಮೂಲ ಮಾಡುವೆ!” ಎಂದು ಹೇಳಿದೆನು.


ನಾನು ಬಾಬಿಲೋನಿನ ರಾಜನ ಕೈಗಳನ್ನು ಬಲಪಡಿಸುವೆನು. ಫರೋಹನ ಕೈಗಳು ಜೋಲುಬೀಳುವವು. ಆಗ ಅವರು ನಾನೇ ಯೆಹೋವನೆಂದು ತಿಳಿಯುವರು. “ನನ್ನ ಖಡ್ಗವನ್ನು ನಾನು ಬಾಬಿಲೋನ್ ರಾಜನ ಕೈಗಳಲ್ಲಿ ಇಡುವೆನು. ಆಗ ಅವನು ಈಜಿಪ್ಟಿನ ಕಡೆಗೆ ಅದನ್ನು ಚಾಚುವನು.


ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಬಯಲಿನ ಕಡೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು. ಅವನಿಗೆ ದೂತನು ಕಾಣಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು