Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:17 - ಪರಿಶುದ್ದ ಬೈಬಲ್‌

17 ದಾವೀದನು ದೇವರಿಗೆ, “ಪಾಪಮಾಡಿದವನು ನಾನು. ಜನಗಣತಿಯನ್ನು ಮಾಡಲು ಆಜ್ಞಾಪಿಸಿದವನು ನಾನೇ. ನಾನು ತಪ್ಪು ಮಾಡಿದೆ! ಆದರೆ ಇಸ್ರೇಲರು ಏನೂ ತಪ್ಪು ಮಾಡಲಿಲ್ಲ. ದೇವರಾದ ಯೆಹೋವನೇ, ನನ್ನನ್ನೂ ನನ್ನ ಪರಿವಾರದವರನ್ನೂ ಶಿಕ್ಷಿಸು. ನಿನ್ನ ಜನರನ್ನು ಸಾಯಿಸುವ ವ್ಯಾಧಿಯನ್ನು ನಿಲ್ಲಿಸು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೇ; ಮಹಾಪಾಪ ಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಸರ್ವೇಶ್ವರಾ, ನನ್ನ ದೇವರೇ, ನಿಮ್ಮ ಕತ್ತಿ ನಿಮ್ಮ ಜನರನ್ನು ಬಾಧಿಸದೆ, ಅವರಿಗೆ ವಿರೋಧವಾಗಿ ಇರದೆ, ನನಗೂ ನನ್ನ ಮನೆಯವರಿಗೂ ವಿರೋಧ ಆಗಿರಲಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತು ದಾವೀದನು ದೇವರಿಗೆ - ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ! ಮಹಾಪಾಪಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವದಕ್ಕೆ ಅವರಿಗೆ ವಿರೋಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದಾವೀದನು ದೇವರಿಗೆ, “ಜನರಲ್ಲಿ ಯುದ್ಧ ವೀರರನ್ನು ಲೆಕ್ಕಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಈ ಕೆಟ್ಟದ್ದನ್ನು ಮಾಡಿದೆನು, ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನನ್ನ ಯೆಹೋವ ದೇವರೇ, ನಿಮ್ಮ ಹಸ್ತವು ನಿಮ್ಮ ಜನರನ್ನು ಬಾಧಿಸದೆ, ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:17
20 ತಿಳಿವುಗಳ ಹೋಲಿಕೆ  

ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಯೇಸು ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ನಿಜವಾದ ಪ್ರೀತಿಯೆಂದರೇನೆಂಬುದನ್ನು ನಾವು ತಿಳಿದುಕೊಂಡೆವು. ಆದ್ದರಿಂದ ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾದವರಿಗೋಸ್ಕರ ನಾವೂ ನಮ್ಮ ಪ್ರಾಣಗಳನ್ನು ಕೊಡಬೇಕು.


ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.


ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?


ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು!


ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.


ಕೊಯ್ಯಲ್ಪಡುವ ಕುರಿಗಳೋ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ; ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಟ್ಟಿರುವೆ.


ದಾವೀದನು ದೇವರಿಗೆ, “ನಾನು ಕೇವಲ ಹುಚ್ಚು ಕೆಲಸ ಮಾಡಿದೆನು. ಇಸ್ರೇಲರ ಜನಗಣತಿ ಮಾಡಿ ಪಾಪಮಾಡಿದೆನು. ಈಗ ನಿನ್ನ ಸೇವಕನಾದ ನನ್ನ ಪಾಪವನ್ನು ನಿರ್ಮೂಲ ಮಾಡು” ಎಂದು ಬೇಡಿಕೊಂಡನು.


ಮೀಕಾಯೆಹು, “ಮುಂದೆ ಸಂಭವಿಸುವುದು ನನಗೆ ಕಾಣುತ್ತಿದೆ. ಇಸ್ರೇಲಿನ ಸೈನ್ಯವು ಬೆಟ್ಟಗಳ ಮೇಲೆ ಚೆಲ್ಲಾಪಿಲ್ಲಿಯಾಗಿ ಕುರುಬನಿಲ್ಲದ ಕುರಿಗಳಂತಾಗಿದೆ. ಯೆಹೋವನು ಹೇಳುವುದು ಇದನ್ನೇ, ‘ಈ ಜನರಿಗೆ ನಾಯಕನಿಲ್ಲ. ಅವರು ಯುದ್ಧಮಾಡದೆ, ಮನೆಗೆ ಹೋಗಬೇಕು’” ಎಂದು ಹೇಳಿದನು.


ಜನರನ್ನು ಕೊಂದ ದೂತನನ್ನು ದಾವೀದನು ನೋಡಿ ಯೆಹೋವನೊಂದಿಗೆ ಮಾತನಾಡಿದನು. ದಾವೀದನು ಯೆಹೋವನಿಗೆ, “ನಾನು ಪಾಪ ಮಾಡಿದೆನು. ನಾನು ತಪ್ಪು ಮಾಡಿದೆನು. ಆದರೆ ಈ ಜನರು ಕೇವಲ ಕುರಿಗಳಂತೆ ನಿರಪರಾಧಿಗಳು. ಅವರು ಯಾವ ತಪ್ಪನ್ನೂ ಮಾಡಲಿಲ್ಲ. ದಯಮಾಡಿ ನಿನ್ನ ದಂಡನೆಯು ನನಗೆ ಮತ್ತು ನನ್ನ ತಂದೆಯ ಕುಲದ ವಿರುದ್ಧವಾಗಿರಲಿ” ಎಂದು ಹೇಳಿದನು.


ಯೆಹೋವನು ಇಸ್ರೇಲರ ಮೇಲೆ ಮತ್ತೆ ಕೋಪಗೊಂಡು ಇಸ್ರೇಲರ ವಿರುದ್ಧನಾಗುವಂತೆ ದಾವೀದನನ್ನು ಪ್ರೇರೇಪಿಸಿದನು. ದಾವೀದನು, “ಇಸ್ರೇಲಿನ ಮತ್ತು ಯೆಹೂದದ ಜನಗಣತಿ ಮಾಡಿರಿ” ಎಂದು ಆಜ್ಞಾಪಿಸಿದನು.


ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’


“ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು.


ಈಗ ನೀವು ಅದನ್ನೇ ಮಾಡುತ್ತಿದ್ದೀರಿ. ನೀವು ಯೆಹೋವನಿಗೆ ವಿಮುಖರಾಗುತ್ತಿದ್ದೀರಿ. ನೀವು ಮಾಡುತ್ತಿರುವುದನ್ನು ನಿಲ್ಲಿಸದಿದ್ದರೆ, ಪ್ರತಿಯೊಬ್ಬ ಇಸ್ರೇಲಿನವನ ಮೇಲೆಯೂ ಯೆಹೋವನು ಕೋಪಿಸಿಕೊಳ್ಳುವನು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಆದ್ದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ಈ ಯುವಕನು ತನ್ನ ಸಹೋದರರೊಂದಿಗೆ ಹಿಂತಿರುಗಿ ಹೋಗಲಿ; ನಾನು ಇಲ್ಲಿ ನಿಮಗೆ ಗುಲಾಮನಾಗಿರುವೆನು.


ಯೋನನು, “ಈ ಬಿರುಗಾಳಿಗೆ ನಾನೇ ಕಾರಣ. ಈಗ ನನ್ನನ್ನೆತ್ತಿ ಸಮುದ್ರದೊಳಗೆ ಬಿಸಾಡಿರಿ. ಆಗ ಸಮುದ್ರವು ಶಾಂತವಾಗುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು