Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:18 - ಪರಿಶುದ್ದ ಬೈಬಲ್‌

18 ಆಗ ಯೆಹೋವನ ದೂತನು ಗಾದನೊಂದಿಗೆ ಮಾತನಾಡಿ, “ದಾವೀದನು ಒಂದು ಯಜ್ಞವೇದಿಕೆಯನ್ನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ಕಟ್ಟಿ ಯೆಹೋವನನ್ನು ಆರಾಧಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಯೆಹೋವನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಸರ್ವೇಶ್ವರನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಹೋಗಬೇಕೆಂದು ದಾವೀದನಿಗೆ ಹೇಳು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಯೆಹೋವನ ದೂತನು ಗಾದನಿಗೆ - ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು ಎಂಬದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೋವ ದೇವರ ದೂತನು ಗಾದನಿಗೆ, “ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:18
7 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿರುವ ಮೋರೀಯಾ ಬೆಟ್ಟದ ಮೇಲೆ ಸೊಲೊಮೋನನು ದೇವಾಲಯವನ್ನು ಕಟ್ಟಲು ಪ್ರಾರಂಭಿಸಿದನು. ಅದೇ ಸ್ಥಳದಲ್ಲಿ ಸೊಲೊಮೋನನ ತಂದೆಯಾದ ದಾವೀದನಿಗೆ ಯೆಹೋವನು ದರ್ಶನ ಕೊಟ್ಟಿದ್ದನು. ಅದು ಯೆಬೂಸಿಯನಾದ ಒರ್ನಾನನ ಕಣವಾಗಿತ್ತು. ಆಲಯವನ್ನು ಕಟ್ಟಲು ದಾವೀದನು ಆ ಸ್ಥಳವನ್ನು ತಯಾರು ಮಾಡಿದ್ದನು.


ಆ ದಿನ ಗಾದನು ದಾವೀದನ ಬಳಿಗೆ ಬಂದು, “ಹೋಗಿ, ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸು” ಎಂದು ಹೇಳಿದನು.


ದೇವರು ಜೆರುಸಲೇಮಿನ ಜನರನ್ನು ನಾಶನ ಮಾಡುವುದಕ್ಕೆ ದೂತನನ್ನು ಕಳುಹಿಸಿದನು. ಯೆಹೋವನು ಅದನ್ನು ನೋಡಿ ದುಃಖಗೊಂಡು ಜನರನ್ನು ನಾಶಮಾಡಲು ಬಂದಿದ್ದ ದೂತನಿಗೆ, “ಸಾಕು, ಇನ್ನು ನಿಲ್ಲಿಸು” ಅಂದನು. ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತುಕೊಂಡಿದ್ದನು.


ಗಾದನು ದಾವೀದನ ಬಳಿಗೆ ಹೋಗಿ, “ಯೆಹೋವನು ಹೀಗೆನ್ನುತ್ತಾನೆ: ‘ನೀನು ಸಹಿಸಿಕೊಳ್ಳಬಲ್ಲ ಶಿಕ್ಷೆಯನ್ನು ಆರಿಸಿಕೊ. ಮೂರು ವರ್ಷಗಳ ಬರಗಾಲ; ಅಥವಾ ನಿನ್ನ ವೈರಿಗಳಿಗೆ ಮೂರು ತಿಂಗಳು ಶರಣಾಗುವಿಕೆ; ಅಥವಾ ಮೂರು ದಿವಸ ಕಾಲ ಭಯಂಕರ ಕಾಯಿಲೆಯು ನಿನ್ನ ರಾಜ್ಯವೆಲ್ಲಾ ಹಬ್ಬುವದು; ಯೆಹೋವನ ದೂತನು ಇಡೀ ಇಸ್ರೇಲನ್ನು ದಾಟಿ ಸಿಕ್ಕಿದವರನ್ನೆಲ್ಲಾ ಹತಿಸಿಬಿಡುವನು.’ ದಾವೀದನೇ, ನನ್ನನ್ನು ನಿನ್ನ ಬಳಿಗೆ ದೇವರೇ ಕಳುಹಿಸಿರುತ್ತಾನೆ. ನೀನು ಯಾವ ಶಿಕ್ಷೆಯನ್ನು ಆರಿಸಿಕೊಳ್ಳುವಿ ಎಂಬುದನ್ನು ನನಗೆ ತಿಳಿಸು.”


ಗಾದನು ದಾವೀದನಿಗೆ ಇದನ್ನು ತಿಳಿಸಿದ ಕೂಡಲೇ ಅವನು ಒರ್ನಾನನ ಕಣಕ್ಕೆ ಹೋದನು.


ಆಗ ದಾವೀದನು, “ದೇವರ ಆಲಯವೂ ಆತನ ಯಜ್ಞವೇದಿಕೆಯೂ ಇದೇ ಸ್ಥಳದಲ್ಲಿ ಕಟ್ಟಲ್ಪಡುವದು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು