1 ಪೂರ್ವಕಾಲ ವೃತ್ತಾಂತ 21:2 - ಪರಿಶುದ್ದ ಬೈಬಲ್2 ದಾವೀದನು ಯೋವಾಬನನ್ನೂ ಇಸ್ರೇಲರ ಇತರ ಅಧಿಪತಿಗಳನ್ನೂ ಕರೆದು ಅವರಿಗೆ, “ದೇಶದೊಳಕ್ಕೆ ಹೋಗಿ ಇಸ್ರೇಲರೆಲ್ಲರನ್ನು ಲೆಕ್ಕಿಸಿರಿ. ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣ ತನಕ ಎಲ್ಲಾ ಊರುಗಳನ್ನು ಸಂಚರಿಸಿ ಜನರನ್ನು ಲೆಕ್ಕಿಸಿರಿ. ಆಗ ನನಗೆ ನನ್ನ ರಾಜ್ಯದ ಜನಸಂಖ್ಯೆಯು ತಿಳಿಯುವದು” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದಾವೀದನು ಯೋವಾಬನನ್ನೂ ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ ಇಸ್ರಯೇಲರನ್ನು ಲೆಕ್ಕಮಾಡಿಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದಾವೀದನು ಯೋವಾಬನನ್ನೂ ಜನಾಧಿಪತಿಗಳನ್ನೂ ಕರೆದು - ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ ಇಸ್ರಾಯೇಲ್ಯರನ್ನು ಲೆಕ್ಕಮಾಡಿಕೊಂಡು ಬನ್ನಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ದಾವೀದನು ಯೋವಾಬನನ್ನೂ ಜನರ ಪ್ರಧಾನರನ್ನೂ ಕರೆದು ಅವರಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀವು ಹೋಗಿ ಬೇರ್ಷೆಬವು ಮೊದಲುಗೊಂಡು, ದಾನ್ ಊರಿನವರೆಗೆ ಇಸ್ರಾಯೇಲರನ್ನು ಲೆಕ್ಕಿಸಿ, ಅವರ ಲೆಕ್ಕವನ್ನು ನನಗೆ ತೆಗೆದುಕೊಂಡು ಬನ್ನಿರಿ,” ಎಂದನು. ಅಧ್ಯಾಯವನ್ನು ನೋಡಿ |